ಅತ್ತ ಸೇನೆ ಇತ್ತ ಹಾಕಿ: ಪಾಕ್ ವಿರುದ್ಧ ಅಬ್ಬರಿಸಿದ ಭಾರತ, ಭರ್ಜರಿ ಗೆಲವು
ಒಂದೆಡೆ ಪಾಕಿಸ್ತಾನದ ಗಡಿಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸಿಡಿದೇಳುತ್ತಿದ್ದರೆ, ಮತ್ತೊಂದೆಡೆ ಅಂಡರ್-18 ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲೂ ಭಾರತದ ಆಟಗಾರರು ಪಾಕಿಸ್ತಾನದ...

ನವದೆಹಲಿ: ಒಂದೆಡೆ ಪಾಕಿಸ್ತಾನದ ಗಡಿಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸಿಡಿದೇಳುತ್ತಿದ್ದರೆ, ಮತ್ತೊಂದೆಡೆ ಅಂಡರ್-18 ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲೂ ಭಾರತದ ಆಟಗಾರರು ಪಾಕಿಸ್ತಾನದ ವಿರುದ್ಧ ಅಬ್ಬರಿಸುವ ಮೂಲಕ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಢಾಕಾದಲ್ಲಿ ನಡೆದ ಅಂಡರ್-18 ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿಯುವ ಮೂಲಕ ಭಾರತ ಪುರುಷರ ತಂಡ 3-1 ಗೋಲುಗಳ ಅಂತರದಲ್ಲಿ ಪಾಕಿಸ್ತಾನದ ವಿರುದ್ಧ ಗೆಲವು ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
ಆರಂಭದಿಂದಲೇ ಉತ್ತಮ ಪ್ರದರ್ಶನ ನೀಡಲು ಆರಂಭಿಸಿದ್ದ ಭಾರತ, ನಿಧಾನವಾಗಿ ಅತ್ಯುತ್ತಮ ಆಟವಾಡಲು ಆರಂಭಿಸಿತ್ತು. ದ್ವಿತೀಯಾರ್ಧದಲ್ಲಿಯೂ ಭಾರತ ಉತ್ತಮ ಆಟವನ್ನು ಮುಂದುವರೆಸಿತ್ತು. ಇದರಂತೆ ಮೂರನೇ ಗೋಲ್ ಹೊಡೆಯುವಲ್ಲಿ ಯಶಸ್ವಿಯಾಯಿತು. ಅಂತಿಮ 10 ನಿಮಿಷಗಳಲ್ಲೂ ಪಾಕಿಸ್ತಾನ ಕಳಪೆ ಪ್ರದರ್ಶನವನ್ನು ತೋರುವ ಮೂಲಕ ಭಾರತಕ್ಕೆ ಮತ್ತೊಂದು ಗೋಲು ಹೊಡೆಯಲು ಅನುವು ಮಾಡಿಕೊಟ್ಟಿತು.
ಇದರಂತೆ ಭಾರತ 3-1 ಗೋಲುಗಳ ಅಂತರದಲ್ಲಿ ಪಾಕಿಸ್ತಾನವನ್ನು ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿತು. ಶುಕ್ರವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


