ಕ್ರೀಡೆ

ಉತ್ತಮ ಪ್ರದರ್ಶನ ಶ್ರೇಯಾಂಕವನ್ನು ಸುಧಾರಿಸುತ್ತದೆ: ಪಿವಿ ಸಿಂಧು

ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಉತ್ತಮ ಪ್ರದರ್ಶನ ಅಗ್ರ ಸ್ಥಾನಕ್ಕೇರಲು ನೆರವಾಗುತ್ತದೆ ಎಂದು ಹೇಳಿದ್ದಾರೆ...

ಉತ್ತಮ ಪ್ರದರ್ಶನ ಶ್ರೇಯಾಂಕವನ್ನು ಸುಧಾರಿಸುತ್ತದೆ: ಪಿವಿ ಸಿಂಧು
ಪಿವಿ ಸಿಂಧು
Published On :
ಹೈದರಾಬಾದ್: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಉತ್ತಮ ಪ್ರದರ್ಶನ ಅಗ್ರ ಸ್ಥಾನಕ್ಕೇರಲು ನೆರವಾಗುತ್ತದೆ ಎಂದು ಹೇಳಿದ್ದಾರೆ. 
ಇಂಡಿಯನ್ ಸೂಪರ್ ಸೀರಿಸ್ ನ ಚಾಂಪಿಯನ್ ಆಗಿ ಹೊರಹೊಮ್ಮಿದ ನಂತರ ಸಿಂಧು ವಿಶ್ವದ ಅಗ್ರ ಶ್ರೇಯಾಂಕದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದರು. ಆದರೆ ನಂತರ ನಡೆದ ಮಲೇಷ್ಯಾ ಓಪನ್ ಮತ್ತು ಸಿಂಗಾಪುರ ಓಪನ್ ಸೂಪರ್ ಸೀರಿಸ್ ನ ಸೋಲಿನಿಂದಾಗಿ ಕಳೆದ ವಾರ ಸಿಂಧು 5ನೇ ಸ್ಥಾನಕ್ಕೆ ಕುಸಿದಿದ್ದಾರೆ. 
ಈ ಬಗ್ಗೆ ಪ್ರತಿಕ್ರಿಯಿಸಿರುವ 21 ವರ್ಷದ ಸಿಂಧು ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೆ ಮುಂದೆ ಅಗ್ರಸ್ಥಾನ ಪಡೆಯಬಹುದು. ಇದಕ್ಕಾಗಿ ತಾನು ಸರ್ವ ಪ್ರಯತ್ನ ಮಾಡುವುದಾಗಿ ಎಂದು ಹೇಳಿದ್ದಾರೆ.  
ಚೀನಾದಲ್ಲಿ ಏಪ್ರಿಲ್ 25ರಿಂದ ಆರಂಭಗೊಳ್ಳಲಿರುವ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಮತ್ತು ಮೇ ನಲ್ಲಿ ನಡೆಯಲಿರುವ ಸುದೀರ್ಮನ್ ಕಪ್ ಎರಡು ಉತ್ತಮ ಪ್ರದರ್ಶನ ನೀಡುವ ಭರವಸೆಯನ್ನು ಸಿಂಧು ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.