ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು
ಇದೇ ಮೊದಲ ಬಾರಿಗೆ ರಿಯೋ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಫೈನಲ್ ಗೆ ಪ್ರವೇಶಿಸಿದ್ದಾರೆ...

Published On :
ಇದೇ ಮೊದಲ ಬಾರಿಗೆ ರಿಯೋ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಫೈನಲ್ ಗೆ ಪ್ರವೇಶಿಸಿದ್ದಾರೆ.
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ 4ನೇ ಶ್ರೇಯಾಂಕಿತೆ ಪಿವಿ ಸಿಂಧು 10ನೇ ಶ್ರೇಯಾಂಕಿತೆ ಚೀನಾದ ಚೇನ್ ಯೂಫಿಯನ್ನು 21-13, 21-10 ನೇರ ಸೆಟ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದಾರೆ.
ಇನ್ನು ವಿಶ್ವದ 6ನೇ ಶ್ರೇಯಾಂಕಿತೆ ಚೀನಾದ ಸನ್ ಯು ವಿರುದ್ಧ 21-14, 21-9 ನೇರ ಸೆಟ್ ಗಳಿಂದ ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದರು.
ಸದ್ಯ ವಿಶ್ವ ಚಾಂಪಿಯನ್ ಶಿಫ್ ನಲ್ಲಿ ಈಗಾಗಲೇ ಎರಡು ಕಂಚಿನ ಪದಕ ಜಯಿಸಿರುವ ಪಿವಿ ಸಿಂಧು ಫೈನಲ್ ಪ್ರವೇಶಿಸುವ ಮೂಲಕ ಬೆಳ್ಳಿ ಪದಕ ಖಚಿತಪಡಿಸಿಕೊಂಡಿದ್ದು ಚಿನ್ನಕ್ಕೆ ಕಣ್ಣಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


