ಕ್ರೀಡೆ

ವಿಶ್ವ ಹಾಕಿ ಲೀಗ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವಿಶ್ವ ಹಾಕಿ ಲೀಗ್‌ನ ಸೆಮಿ ಫೈನಲ್‌ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ಪಾಕಿಸ್ತಾನ ತಂಡವನ್ನು 7-1 ಅಂತರದಿಂದ ಬಗ್ಗು ಬಡಿದು ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ.

ವಿಶ್ವ ಹಾಕಿ ಲೀಗ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಪಿಟಿಐ ಚಿತ್ರ
Published On :
ಲಂಡನ್‌: ವಿಶ್ವ ಹಾಕಿ ಲೀಗ್‌ನ ಸೆಮಿ ಫೈನಲ್‌ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ಪಾಕಿಸ್ತಾನ ತಂಡವನ್ನು 7-1 ಅಂತರದಿಂದ ಬಗ್ಗು ಬಡಿದು ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ.
ಲಂಡನ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಹಾಕಿ ತಂಡ ಪಾಕಿಸ್ತಾನ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿ, ಕ್ವಾರ್ಟರ್‌ ಪ್ರವೇಶ ಪಡೆದುಕೊಂಡಿದೆ. ಭಾರತದ ಪರ ಆಕಾಶ್‌ದೀಪ್‌ ಉತ್ತಮ ಗೋಲ್‌ ಗಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.
ಇಂದಿನ ಬಿ ಗುಂಪಿನ ಪಂದ್ಯದಲ್ಲಿ ಭಾರತ ತಂಡ 7-1 ಗೋಲುಗಳಿಂದ ಪಾಕಿಸ್ತಾನಕ್ಕೆ ಸೋಲುಣಿಸಿದ್ದು, ಪಂದ್ಯದ ಆರಂಭದಲ್ಲಿ ಪಾಕಿಸ್ತಾನ ಮೇಲುಗೈ ಸಾಧಿಸಿತ್ತಾದರೂ 13ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಹರ್ಮನ್‌ ಪ್ರೀತ್ ಸಿಂಗ್‌ರ ಅದ್ಭುತ ಡ್ರ್ಯಾಗ್‌ನಿಂದ ಮೊದಲ ಗೋಲು ಗಳಿಸಿದ ಭಾರತ ಅಲ್ಲಿಂದ ಹಿಂದಿರುಗಿ ನೋಡಲಿಲ್ಲ. ಹರ್ಮಾನ್‌ ಪ್ರೀತ್ 2, ತಲ್ವೀಂದರ್ ಸಿಂಗ್ 2, ಆಕಾಶ್‌ ದೀಪ್ ಸಿಂಗ್ 1, ಪರದೀಪ್ ಮೋರ್ 1 ಗೋಲು ಗಳಿಸಿದರು. ಆ ಮೂಲಕ ಭಾರತ ಪಾಕಿಸ್ತಾನದ ವಿರುದ್ಧ 7-1 ಅಂತರದ ಭರ್ಜರಿ ಜಯ ದಾಖಲಿಸಿದೆ. 
ಇನ್ನು ಭಾರತ ಮತ್ತು ನೆದರ್‌ ಲೆಂಡ್ ತಂಡಗಳು ಈಗಾಗಲೇ ಕ್ವಾರ್ಟರ್‌ ಫೈನಲ್ ಪ್ರವೇಶ ಖಚಿತಪಡಿಸಿಕೊಂಡಿದ್ದು, ಜೂನ್ 22ರಂದು ಎಂಟರ ಹಂತದ ನಾಕೌಟ್ ಪಂದ್ಯಗಳು ನಡೆಯಲಿದೆ. ಜೂನ್ 24ರಂದು ಸೆಮಿಫೈನಲ್ ಮತ್ತು ಜೂನ್ 25ರಂದು ಫೈನಲ್ ಪಂದ್ಯ ನಡೆಯಲಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.