ಇಂಗ್ಲೆಂಡ್ ಪೊಲೀಸರಿಂದ ಸರ್ದಾರ್ ವಿಚಾರಣೆ, ನೆದರ್‌ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಆಡ್ತಾರಾ?
ಎರಡು ವರ್ಷ ಹಳೆಯದಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಸೋಮವಾರ ಇಂಗ್ಲೆಂಡ್...

Published On :
ಲಂಡನ್: ಎರಡು ವರ್ಷ ಹಳೆಯದಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಸೋಮವಾರ ಇಂಗ್ಲೆಂಡ್ ಪೊಲೀಸರು ವಿಚಾರಣೆ ನಡೆಸಿದ್ದು ಇದೀಗ ಸರ್ದಾರ್ ಇಂದಿನ ನೆದರ್‌ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಆಡುತ್ತಾರೆಯೆ ಎಂಬ ಸಂದೇಹ ವ್ಯಕ್ತವಾಗಿದೆ.
ಹಾಕಿ ವಿಶ್ವ ಲೀಗ್ ಲಂಡನ್ ನಲ್ಲಿ ನಡೆಯುತ್ತಿದ್ದು ಭಾರತ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 7-1 ಗೋಲ್ ಗಳಿಂದ ಜಯ ಗಳಿಸಿದೆ. ಮರು ದಿನವೇ ಸುಮಾರು ನಾಲ್ಕು ಗಂಟೆ ವಿಚಾರಣೆ ನಡೆಸಲಾಗಿತ್ತು.
ಭಾರತ ಮೂಲದ ಬ್ರಿಟನ್ ಹಾಕಿ ಆಟಗಾರ್ತಿ ಅಶ್ಪಾಲ್ ಭೋಗಲ್ ಅವರು ಸರ್ದಾರ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದರು. ಯಾವುದೇ ಮುನ್ಸೂಚನೆ ನೀಡದೆ ಅಂತಾರಾಷ್ಟ್ರೀಯ ಟೂರ್ನಿಯೊಂದರ ಮಧ್ಯದಲ್ಲಿ ತಂಡದ ಆಟಗಾರನೊಬ್ಬನನ್ನು ವಿಚಾರಣೆಗೆ ಒಳಪಡಿಸಿರುವುದಕ್ಕೆ ಭಾರತ ಹಾಕಿ ತಂಡದ ಮ್ಯಾನೇಜ್ ಮೆಂಟ್ ತೀವ್ರ ಬೇಸರ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


