ಆಸ್ಟ್ರೇಲಿಯಾ ಓಪನ್: ಮುಂದಿನ ಹಂತಕ್ಕೆ ಲಗ್ಗೆ ಇಟ್ಟ ಶ್ರೀಕಾಂತ್, ಸೈನಾ, ಸಾಯಿ ಪ್ರಣೀತ್
ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ನ ನಾಕೌಟ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಸೈನಾ ನೆಹ್ವಾಲ್, ಕಿದಂಬಿ ಶ್ರೀಕಾಂತ್ ಮತ್ತು ಬಿ ಸಾಯಿ ಪ್ರಣೀತ್ ಜಯ ಗಳಿಸಿದ್ದಾರೆ...

Published On :
ಸಿಡ್ನಿ: ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ನ ನಾಕೌಟ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಸೈನಾ ನೆಹ್ವಾಲ್, ಕಿದಂಬಿ ಶ್ರೀಕಾಂತ್ ಮತ್ತು ಬಿ ಸಾಯಿ ಪ್ರಣೀತ್ ಜಯ ಗಳಿಸಿದ್ದಾರೆ.
ಕಳೆದ ವಾರ ಇಂಡೋನೇಷ್ಯಾ ಓಪನ್ ಟೈಟಲ್ ಗೆದ್ದು ಬೀಗಿದ್ದು ಶ್ರೀಕಾಂತ್ ಇದೀಗ ಆಸ್ಟ್ರೇಲಿಯಾ ಓಪನ್ ನಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಚೀನಾದ ತೈಪೆ ಕನ್ ಚಾವೊ ಯು ರನ್ನು 21-13, 21-16 ನೇರ ಸೆಟ್ ಗಳಿಂದ ಮಣಿಸುವ ಮೂಲಕ ಮುಂದಿನ ಹಂತಕ್ಕೆ ತಲುಪಿಸಿದ್ದಾರೆ.
ಇನ್ನು ಸಾಯಿ ಪ್ರಣೀತ್ ಇಂಡೋನೇಷ್ಯಾದ ಟಾಮಿ ಸುಗಿರ್ಟೊ ರನ್ನು 10-21, 21-12, 21-10 ಸೆಟ್ ಗಳಿಂದ ಜಯ ಗಳಿಸಿದ್ದಾರೆ. ಮುಂದಿನ ಹಂತದಲ್ಲಿ ಸಾಯಿ ಪ್ರಣೀತ್ ಚೀನಾದ ಹುವಾಂಗ್ ಯುಕ್ಸಿಯಾಂಗ್ ರನ್ನು ಮತ್ತು ಕಿದಂಬಿ ಶ್ರೀಕಾಂತ್ ಕೊರಿಯಾದ ಸನ್ ವಾನ್ ಹುರನ್ನು ಎದುರಿಸಲಿದ್ದಾರೆ.
ಇನ್ನು ಮಹಿಳಾ ವಿಭಾಗದಲ್ಲಿ ಸೈನಾ ನೆಹ್ವಾಲ್ ಎದುರಾಳಿ ಕೊರಿಯಾದ ಸುಂಗ್ ಜಿ ಹ್ಯುನ್ 21-10, 21-16 ನೇರ ಸೆಟ್ ಗಳಿಂದ ಮಣಿಸಿ ಮುಂದಿನ ಹಂತಕ್ಕೆ ತಲುಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Saina Nehwalಸೈನಾ ನೆಹ್ವಾಲ್Australian Openಆಸ್ಟ್ರೇಲಿಯಾ ಓಪನ್Kidambi SrikanthSai Praneethಸಾಯಿ ಪ್ರಣೀತ್ಕಿದಂಬಿ ಶ್ರೀಕಾಂತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


