ವಿಶ್ವ ಹಾಕಿ ಲೀಗ್: ಪಾಕಿಸ್ತಾನಕ್ಕೆ ಮತ್ತೆ ಸೋಲುಣಿಸಿದ ಭಾರತ!
ವಿಶ್ವ ಹಾಕಿ ಲೀಗ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧದ ಭಾರತದ ಪಾರಮ್ಯ ಮತ್ತೆ ಮುಂದುವರೆದಿದ್ದು, ಶನಿವಾರ ನಡೆದ ಪಂದ್ಯದಲ್ಲಿ ಭಾರತ ಹಾಕಿ ತಂಡ ಪಾಕಿಸ್ತಾನವನ್ನು 6-1 ಅಂತರದಿಂದ ಮಣಿಸಿದೆ.

Published On :
ಲಂಡನ್: ವಿಶ್ವ ಹಾಕಿ ಲೀಗ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧದ ಭಾರತದ ಪಾರಮ್ಯ ಮತ್ತೆ ಮುಂದುವರೆದಿದ್ದು, ಶನಿವಾರ ನಡೆದ ಪಂದ್ಯದಲ್ಲಿ ಭಾರತ ಹಾಕಿ ತಂಡ ಪಾಕಿಸ್ತಾನವನ್ನು 6-1 ಅಂತರದಿಂದ ಮಣಿಸಿದೆ.
ಗ್ರೂಪ್ ಹಂತದ ಮೊದಲ ಮೂರು ಪಂದ್ಯಗಳಲ್ಲಿ ಜಯ ಗಳಿಸಿದ್ದ ಭಾರತ, ಕೊನೆಯ ಪಂದ್ಯದಲ್ಲಿ ಹಾಲೆಂಡ್ ವಿರುದ್ಧ 1-3 ಅಂತರದಲ್ಲಿ ಸೋಲು ಅನುಭವಿಸಿತ್ತು. ಬಳಿಕ ಪಾಕಿಸ್ತಾನದ ವಿರುದ್ಧ ನಡೆದ ಮತ್ತೊಂದು ಪಂದ್ಯದಲ್ಲಿ 7-1 ಅಂತರದಲ್ಲಿ ಜಯ ಗಳಿಸಿ, ಕ್ವಾರ್ಟರ್ ಫೈನಲ್‌ನಲ್ಲಿ ಮಲೇಷ್ಯಾ ವಿರುದ್ಧ ಸೋತು ಮುಖಭಂಗ ಅನುಭವಿಸಿತ್ತು. ಆ ಮೂಲಕ ಪಂದ್ಯಾವಳಿಯಿಂದ ಭಾರತ ಹೊರಬಿದ್ದಿತ್ತು.
ಇದೀಗ 5ರಿಂದ 8ರ ತನಕದ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಮತ್ತೆ ಪಾಕಿಸ್ತಾನ ವಿರುದ್ಧ ಭಾರತ ಜಯಗಳಿಸಿದ್ದು, ಪಾಕ್ ವಿರುದ್ಧ 6-1 ಅಂತರದ ಗೆಲುವು ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಭಾರತದ ರಮಣದೀಪ್ ಸಿಂಗ್(8ನೇ ಹಾಗೂ 28ನೇ ನಿಮಿಷ), ಆಕಾಶ್ ದೀಪ್ ಸಿಂಗ್(12ನೇ ಮತ್ತು 27ನೇ ನಿಮಿಷ), ತಲ್ವಿಂದರ್ (25ನೇ ನಿಮಿಷ), ಹರ್ಮನ್‌ಪ್ರೀತ್ (36ನೇ ನಿಮಿಷ) ತಲಾ ಒಂದು ಗೋಲು ದಾಖಲಿಸಿದರು. ಪಾಕಿಸ್ತಾನ ತಂಡದ ಪರ ಎಜಾಜ್ ಅಹ್ಮದ್ (41ನೇ ನಿಮಿಷ) ಏಕೈಕ ಗೋಲು ದಾಖಲಿಸಿದರು.
ಈ ಗೆಲುವಿನೊಂದಿಗೆ ಭಾರತ ಭಾನುವಾರ ನಡೆಯಲಿರುವ ಮತ್ತೊಂದು ಮಹತ್ವದ ಪಂದ್ಯದಲ್ಲಿ ಕೆನಡಾ ವಿರುದ್ಧ 5ರಿಂದ 6ನೇ ಸ್ಥಾನಕ್ಕಾಗಿ ಸೆಣಸಾಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


