ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ಮೇರಿ ಕೋಮ್ ಫೈನಲ್ ಗೆ ಲಗ್ಗೆ
ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ಎಂ. ಸಿ. ಮೇರಿ ಕೋಮ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.

Published On :
ಹೋ ಚಿ ಮಿನ್ ಸಿಟಿ:: ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ಎಂ. ಸಿ. ಮೇರಿ ಕೋಮ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ. ಮೇರಿ ಕಾಮ್ ಜಪಾನ್ ನ ಸುಬಾಸಾ ಕೊಮುರಾ ಅವರನ್ನು 5-0 ಅಂತರದಲ್ಲಿ ಸೋಲಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅವರು ಅಂತಿಮ ಸುತ್ತಿನಲ್ಲಿ ಗೆಲುವು ಸಾಧಿಸಿದ್ದಾದರೆ, ಭಾರತೀಯರೊಬ್ಬರು ಇದೇ ಮೊದಲ ಬಾರಿಗೆ ಏಷ್ಯಾ ಕಪ್ ನ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ ಖ್ಯಾತಿಗೆ ಪಾತ್ರರಾಗುತ್ತಾರೆ.
ಒಟ್ಟು ಆರು ಬಾರಿ ಏಷ್ಯಾ ಕಪ್ ನಲ್ಲಿ ಭಾಗವಹಿಸಿದ್ದ ಮೇರಿ ಇದೀಗ ಐದನೇ ಬಾರಿಗೆ ಫೈನಲ್ಸ್ ತಲುಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BoxingM C Mary KomAsian Boxing ChampionshipsAsian Boxing Championships finalTsubasa Komuraಎಮ್ ಸಿ ಮೇರಿ ಕೋಮ್ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


