ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್: ಸಾಕ್ಷಿ ಮಲಿಕ್, ಸುಶೀಲ್ ಕುಮಾರ್ ಗೆ ಚಿನ್ನದ ಪದಕ
014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್.......

Published On :
ಇಂದೋರ್: 2014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್ ಪುರುಷರ 74 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಸುಶೀಲ್ ಕುಮಾರ್ ಒಟ್ಟು ಎರಡು ನಿಮಿಷ ಮತ್ತು 33 ಸೆಕೆಂಡುಗಳ ಕಾಲ ಹೋರಾಟ ನಡೆಸಿ ಅಂತಿಮ ಸುತ್ತಿನಲ್ಲಿ ಜಯಶಾಲಿಗಳದರು.ಮೂರು ವರ್ಷಗಳ ಬಳಿಕ ಸುಶೀಲ್ ರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.
ಇದೇ ವೇಳೆ ಭಾರತದ ಏಕೈಕ ಮಹಿಳಾ ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಸಾಕ್ಷಿ ಮಲಿಕ್ ಮತ್ತು ಇನ್ನೋರ್ವ ಕುಸ್ತಿ ಪಟುವಾದ ಗೀತಾ ಫೋಗಟ್ ಅವರು ಕ್ರಮವಾಗಿ 62 ಕೆಜಿ ಮತ್ತು 59 ಕೆಜಿ ವಿಭಾಗಗಳಲ್ಲಿ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ
ಮಧ್ಯಪ್ರದೇಶ ಕುಸ್ತಿ ಅಸೋಸಿಯೇಷನ್ ಆಯೋಜಿಸಿದ್ದ 62ನೇ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್ ನ.15ರಿಂದ ಮೂರು ದಿನಗಳ ಕಾಲ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sushil Kumarಸುಶೀಲ್ ಕುಮಾರ್Geeta PhogatSakshi Malikಸಾಕ್ಷಿ ಮಲಿಕ್ಗೀತಾ ಫೋಗಟ್National Wrestling Championship2014 Glasgow Commonwealth Gamesರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


