ಅಂಡರ್ 23 ಸೀನಿಯರ್ ವಿಶ್ವ ಕುಸ್ತಿ ಪಂದ್ಯಾವಳಿ: ಭಾರತದ ರಿತು ಪೋಗಟ್ ಗೆ ಬೆಳ್ಳಿ ಪದಕ
ಪೋಲೆಂಡಿನಲ್ಲಿ ನಡೆಯುತ್ತಿರುವ 23 ವರ್ಷದೊಳಗಿನವರ ಸೀನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟು ರಿತು ಪೋಗಟ್ ಬೆಳ್ಳಿ ಪದಕ ಜಯಿಸಿದ್ದಾರೆ.

Published On :
ವಾರ್ಸಾ: ಪೋಲೆಂಡಿನಲ್ಲಿ ನಡೆಯುತ್ತಿರುವ 23 ವರ್ಷದೊಳಗಿನವರ ಸೀನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟು ರಿತು ಪೋಗಟ್ ಬೆಳ್ಳಿ ಪದಕ ಜಯಿಸಿದ್ದಾರೆ.
ಪೋಗಟ್ ಅವರು ಬಲ್ಗೇರಿಯಾದ ಸೆಲಿಷ್ಕ ಅವರನ್ನು 4-2 ಅಂಕಗಳಿಂದ ಮಣಿಸಿ ಈ ಸಾಧನೆಗೈದರು.
ಇನ್ನು ಇದೇ ಪಂದ್ಯದಲ್ಲಿ ಟರ್ಕಿಯ ಡೆಮಿರಾ ಅವರು 4-4 ಅಂಕಗಳೊಡನೆ ಚಿನ್ನದ ಪದಕ ವಿಜೇತೆಯಾಗಿ ಹೊರಹೊಮ್ಮಿದ್ದಾರೆ.
ಇತ್ತೀಚೆಗೆ ಿಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಜಯಿಸಿದ್ದ ಪೋಗಟ್ ಮೇ ನಲ್ಲಿ ನಡೆದಿದ್ದ ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ವಿಜೇತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Polandಪೋಲೆಂಡ್silver medalಬೆಳ್ಳಿ ಪದಕRitu PhogatWorld Wrestling Championshipರಿತು ಫೊಗಟ್ವಿಶ್ವ ಕುಸ್ತಿ ಚಾಂಪಿಯನ್ ಶಿಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


