ಕಿಡಂಬಿ ಶ್ರೀಕಾಂತ್ ಗೆ ಡೆನ್ಮಾರ್ಕ್ ಓಪನ್ ಪ್ರಶಸ್ತಿ ಗರಿ
ಭಾರತದ ಹೆಮ್ಮೆಯ ಕ್ರೀಡಾಪಟು ಕಿಡಂಬಿ ಶ್ರೀಕಾಂತ್ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪ್ರಶಸ್ತಿ ಜಯಿಸಿದ್ದಾರೆ

Published On :
ಒಡೆನ್ಸ್: ಭಾರತದ ಹೆಮ್ಮೆಯ ಕ್ರೀಡಾಪಟು ಕಿಡಂಬಿ ಶ್ರೀಕಾಂತ್ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪ್ರಶಸ್ತಿ ಜಯಿಸಿದ್ದಾರೆ.
ಇಂದು ನಡೆದ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಕೊರಿಯಾ ಮೂಲದ ಲೀ ಹ್ಯುನ್ ಇ ವಿರುದ್ದ 21-10, 21-5ರ ಅಂತರದಿಂದ ಜಯ ಗಳಿಸಿದ ಶ್ರೀಕಾಂತ್ ಇದಕ್ಕಾಗಿ ಕೇವಲ 25 ನಿಮಿಷಗಳನ್ನಷ್ಟೇ ತೆಗೆದುಕೊಂಡರು.
ಇದು ಈ ವರ್ಷದಲ್ಲಿ ಶ್ರೀಕಾಂತ್ ಗಳಿಸಿದ 3ನೇ ಸೂಪರ್ ಸಿರೀಸ್ ಪ್ರಶಸ್ತಿಯಾಗಿದೆ. ಇದಕ್ಕೂ ಮೊದಲು ಇಂಡೋನೇಷ್ಯಾ ಓಪನ್ ಮತ್ತು ಆಸ್ಟ್ರೇಲಿಯನ್ ಓಪನ್‌ನಲ್ಲಿ ಚಾಂಪಿಯನ್ ಎನಿಸಿಕೊಂಡಿದ್ದ ಶ್ರೀಕಾಂತ್, ಸಿಂಗಾಪುರ ಓಪನ್‌ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತSouth Koreaಕಿಡಂಬಿ ಶ್ರೀಕಾಂತ್Kidambi SrikanthDenmark Openಡೆನ್ಮಾರ್ಕ್ ಓಪನ್Lee Hyun-ilದಕ್ಷಿಣ ಕೊರಿಯಾಲೀ ಹ್ಯುನ್ ಇ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


