ಫ್ರೆಂಚ್ ಓಪನ್ ಸೂಪರ್ ಸೀರೀಸ್: ಎರಡನೇ ಸುತ್ತು ಪ್ರವೇಶಿಸಿದ ಸಿಂಧು, ಶ್ರೀಕಾಂತ್
ಪ್ರತಿಷ್ಠಿತ ಫ್ರೆಂಚ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬಾರತದ ಕಿಡಂಬಿ ಶ್ರೀಕಾಂತ್ ಮತ್ತು ಪಿವಿ ಸಿಂಧು ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.

Published On :
ಪ್ಯಾರಿಸ್: ಪ್ರತಿಷ್ಠಿತ ಫ್ರೆಂಚ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬಾರತದ ಕಿಡಂಬಿ ಶ್ರೀಕಾಂತ್ ಮತ್ತು ಪಿವಿ ಸಿಂಧು ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.
ಮೊನ್ನೆ ಕೊನೆಗೊಂಡ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ನಲ್ಲಿ ಚಾಂಪಿಯನ್ ಆಗಿದ್ದ ಶ್ರೀಕಾಂತ್, ಮೊದಲ ಸುತ್ತಿನಲ್ಲಿ 0-3 ಮುನ್ನಡೆ ಗಳಿಸಿದ್ದಾಗ ಶ್ರೀಕಾಂತ್ ಎದುರಾಳಿ ಜರ್ಮನಿಯ ಫ್ಯಾಬಿಯನ್ ರಾತ್ ಗಾಯದ ಸಮಸ್ಯೆಯಿಂದಾಗಿ ಪಂದ್ಯದಿಂದ ನಿವೃತ್ತರಾದರು.
ಶ್ರೀಕಾಂತ್ ತಮ್ಮ ಮುಂದಿನ ಹೋರಾಟದಲ್ಲಿ ಹಾಂಕಾಂಗ್ ನ ವಾಂಗ್ ವಿಂಗ್ ಕಿ ವಿನ್ಸೆಂಟ್ ಅವರನ್ನು ಎದುರಿಸಲಿದ್ದಾರೆ.
ಸರಣಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪಿವಿ ಸಿಂಧು ಸ್ಪೇನ್ ನ ಬೀಟ್ರಿಜ್ ಕಾರ್ರಲೆಸ್ ಅವರನ್ನು 21-19 21-18ರ ಅಂತರದಲ್ಲಿ ಮಣಿಸಿ ಎರಡನೇ ಸುತ್ತಿಗೆ ಪ್ರವೇಶ ಗಿಟ್ಟಿಸಿದರು. ಸಿಂಧು ತಮ್ಮ ಮುಂದಿನ ಸುತ್ತಿನಲ್ಲಿ ಜಪಾನ್‌ನ ಸಯಾಕ ತಕಹಾಶಿ ಸವಾಲನ್ನು ಎದುರಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಿವಿ ಸಿಂಧುಕಿಡಂಬಿ ಶ್ರೀಕಾಂತ್Kidambi SrikanthP V SindhuFrench Open Super SeriesDenmark Open Super Seriesಫ್ರೆಂಚ್ ಓಪನ್ ಸೂಪರ್ ಸೀರೀಸ್ಡೆನ್ಮಾರ್ಕ್ ಓಪನ್ ಸೂಪರ್ ಸೀರೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


