ಕಿಡಂಬಿ ಶ್ರೀಕಾಂತ್ ಫ್ರೆಂಚ್ ಓಪನ್ ಚಾಂಪಿಯನ್
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ...

Published On :
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ಪಂದ್ಯದಲ್ಲಿ ಕಿಡಂಬಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಜಪಾನ್ ಆಟಗಾರ ಕೆಂಟಾ ನಿಶಿಮೊಟೊ ವಿರುದ್ಧ 21-14, 21-13 ನೇರ ಸೆಟ್ ಗಳಿಂದ ಜಯ ಗಳಿಸುವ ಮೂಲಕ ಮೊದಲ ಫ್ರೆಂಚ್ ಓಪನ್ ಟೈಟಲ್ ಗೆ ಮುತ್ತಿಟ್ಟರು.
ಫ್ರೆಂಚ್ ಓಪನ್ ಸೂಪರ್ ಸಿರೀಸ್ ಗೆಲ್ಲುವ ಮೂಲಕ ಕಿಡಂಬಿ ಶ್ರೀಕಾಂತ್ ಇದೇ ವರ್ಷದಲ್ಲಿ ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಶ್ರೀಕಾಂತ್ ಭಾರತದ ಆಟಗಾರ ಎಚ್ ಎಸ್ ಪ್ರನೋಯ್ ಅವರನ್ನು 14-21, 21-19, 21-18 ಸೆಟ್ ಗಳಿಂದ ಪರಾಭವಗೊಳಿಸಿ ಫೈನಲ್ ಗೆ ಪ್ರವೇಶಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಿಡಂಬಿ ಶ್ರೀಕಾಂತ್French Open Super Seriesಫ್ರೆಂಚ್ ಓಪನ್ ಸೂಪರ್ ಸೀರೀಸ್Kidmabi SrikanthKenta Nishimotoಕೆಂಟಾ ನಿಶಿಮೊಟೊ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


