ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮೋದಿಗೆ ನನ್ನ ಗೆಲುವು ಸಮರ್ಪಣೆ: ಪಿವಿ ಸಿಂಧು
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಕೊರಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಈ ಗೆಲುವನ್ನು...

Published On :
ಸಿಯೋಲ್: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಕೊರಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಈ ಗೆಲುವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ.
ನಿನ್ನೆ ಪ್ರಧಾನಿ ಮೋದಿ ಅವರು 67ನೇ ವಸಂತಕ್ಕೆ ಕಾಲಿಟ್ಟಿದ್ದು ಈ ಸಂದರ್ಭದಲ್ಲಿ ನಾನು ಕೊರಿಯಾ ಸೂಪರ್ ಸಿರೀಸ್ ಗೆದ್ದಿರುವುದು ತುಂಬಾ ಖುಷಿಯಾಗಿದೆ. ನನಗೆ ಸಂದ ಜಯವನ್ನು ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ ಎಂದು ಪಿವಿ ಸಿಂಧು ಟ್ವೀಟ್ ಮಾಡಿದ್ದಾರೆ.
ಪಿವಿ ಸಿಂಧು ಟ್ವೀಟ್ ನಲ್ಲಿ ನನ್ನ ಈ ಗೆಲುವನ್ನು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ, ನನ್ನ ಅಚ್ಚುಮೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಇಚ್ಛಿಸುತ್ತೇನೆ ಎಂದು ಬರೆದಿದ್ದಾರೆ.
ರಿಯೋ ಒಲಿಂಪಿಕ್ಸ್ ಮತ್ತು ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಪಿವಿ ಸಿಂಧು ಹಲವು ಸೂಪರ್ ಸಿರೀಸ್ ಗಳನ್ನು ಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿBadmintonಬ್ಯಾಡ್ಮಿಂಟನ್PV Sindhuಪಿವಿ ಸಿಂಧುKorea Open Superserieಕೊರಿಯಾ ಓಪನ್ ಸೂಪರ್ ಸಿರೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


