ಜಪಾನ್ ಓಪನ್ ಬ್ಯಾಡ್ಮಿಂಟನ್: ಕಿದಂಬಿ ಶ್ರೀಕಾಂತ್, ಹೆಚ್ ಎಸ್ ಪ್ರಣಯ್ ಗೆ ಸೋಲು, ಸೆಮೀಸ್ ಗೆ ಪ್ರಣವ್-ಸಿಕ್ಕಿ
ಜಪಾನ್ ಓಪನ್ ಸೂಪರ್ ಸೀರಿಸ್ ನ ಬ್ಯಾಡ್ಮಿಂಟನ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಭಾರತದ ಕಿದಂಬಿ ಶ್ರೀಕಾಂತ್ ಡೆನ್ಮಾರ್ಕ್ ನ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ ಸೋತಿದ್ದಾರೆ.

Published On :
ಟೋಕಿಯೋ: ಜಪಾನ್ ಓಪನ್ ಸೂಪರ್ ಸೀರಿಸ್ ನ ಬ್ಯಾಡ್ಮಿಂಟನ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಭಾರತದ ಕಿದಂಬಿ ಶ್ರೀಕಾಂತ್ ಡೆನ್ಮಾರ್ಕ್ ನ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ ಸೋತಿದ್ದಾರೆ. ಸಿಂಗಲ್ಸ್ ವಿಭಾಗದಲ್ಲಿ ಕೆ.ಶ್ರೀಕಾಂತ್ ಸೋತಿದ್ದರೆ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಣವ್ ಜೆರ್ರಿ ಚೋಪ್ರಾ-ಎನ್ ಸಿಕ್ಕಿ ರೆಡ್ಡಿ ಸೆಮಿಫೈನಲ್ಸ್ ಗೆ ತಲುಪಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ನಡೆದ 40 ನಿಮಿಷಗಳ ಪಂದ್ಯದಲ್ಲಿ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ ಕೆ.ಶ್ರೀಕಾಂತ್ 17-21-17-21 ಸೆಟ್ ಗಳ ಅಂತರದಿಂದ ಪರಾಭವಗೊಂಡಿದ್ದು, ಅಕ್ಸೆಲ್ಸನ್ 3-2 ಅಂತರದಿಂದ ಗೆದ್ದಿದ್ದಾರೆ. ಇನ್ನು ಯುಎಸ್ ಓಪನ್ ಚಾಂಪಿಯನ್ ಹೆಚ್ಎಸ್ ಪ್ರಣಯ್ ಸಹ ಚೀನಾದ ಎದುರಾಳಿ ಎದುರು 15-21 14-21 ಸೆಟ್ ಗಳಿಂದ ಸೋತಿದ್ದಾರೆ.
ಪುರುಷರ ಡಬಲ್ಸ್ ವಿಭಾಗದಲ್ಲಿ ಕೋರಿಯಾ ಎದುರಾಳಿಯನ್ನು 21-18 9-21 21-19 ಸೆಟ್ ಗಳಿಂದ ಮಣಿಸಿರುವ ಪ್ರಣವ್-ಸಿಕ್ಕಿ ಜೋಡಿ ಸೆಮಿಫೈನಲ್ಸ್ ಗೆ ಪ್ರವೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


