ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸಭೆಗೆ ಬಾಕ್ಸಿಂಗ್ ಪ್ರತಿನಿಧಿಯಾಗಿ ಮೇರಿಕೋಮ್ ಆಯ್ಕೆ
ಐದು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮತ್ತು ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಮೇರಿಕೋಮ್....

Published On :
ನವದೆಹಲಿ: ಐದು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮತ್ತು ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಮೇರಿಕೋಮ್, ನವೆಂಬರ್‍ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸಭೆಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಮಿತಿ
ಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ.
ಈ ಗೌರವಕ್ಕೆ ಪಾತ್ರರಾದ ಭಾರತದ ಮೊಟ್ಟ ಮೊದಲ ಬಾಕ್ಸರ್ ಎಂಬ ಹೆಗ್ಗಳಿಕೆಗೂ ಮೇರಿ ಭಾಜನರಾಗಿದ್ದಾರೆ. ಲಾಸನ್ಸೆಯಲ್ಲಿ ನವೆಂಬರ್ 11 ರಿಂದ 30ರವರೆಗೆ ನಡೆಯಲಿರುವ 8ನೇ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಐಒಸಿಯ ಅಥ್ಲೀಟ್‍ಗಳ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಕೋಮ್ ಅವರಿಗೆ ಆಹ್ವಾನ ನೀಡಲಾಗಿದೆ. ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ –ಎಐಬಿಎ ಭಾರತದ ಬಾಕ್ಸಿಂಗ್ ಫೆಡರೇಷನ್‍ಗೆ ಆಹ್ವಾನ
ಪತ್ರಿಕೆಯನ್ನು ಕಳುಹಿಸಿಕೊಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಒಲಿಂಪಿಕ್ಸ್Mary KomOlympicsInternational Boxing Associationಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ಮೇರಿ ಕೊಮ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


