ಕ್ರೀಡೆ

ಕೆನಡಾ: ಜೂನಿಯರ್ ಹಾಕಿ ಆಟಗಾರರಿದ್ದ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 14 ಸಾವು

ಕೆನಡದ ಸಾಸ್ಕಾಚೆವನ್ ಪ್ರಾಂತ್ಯದ ತಿಸ್ದಲೆ ಬಳಿ ಜೂನಿಯರ್ ಹಾಕಿ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್...

ಕೆನಡಾ: ಜೂನಿಯರ್ ಹಾಕಿ ಆಟಗಾರರಿದ್ದ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 14  ಸಾವು
ಸಂಗ್ರಹ ಚಿತ್ರ
Published On :
ಕೆನಡದ ಸಾಸ್ಕಾಚೆವನ್ ಪ್ರಾಂತ್ಯದ ತಿಸ್ದಲೆ ಬಳಿ ಜೂನಿಯರ್ ಹಾಕಿ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ 13 ಆಟಗಾರರು ದಾರುಣ ಸಾವನ್ನಪ್ಪಿದ್ದಾರೆ. 
ಬಸ್ ನಲ್ಲಿ 28 ಮಂದಿ ಆಟಗಾರರು ಪ್ರಯಾಣಿಸುತ್ತಿದ್ದರು. ಈ ಪೈಕಿ ಬಸ್ ನ ಚಾಲಕ ಸೇರಿ 13 ಮಂದಿ ಆಟಗಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ತಿಳಿಸಿದ್ದಾರೆ. 
Story image
ಸಾಸ್ಕಾಚೆವನ್ ಜೂನಿಯರ್ ಹಾಕಿ ಟೂರ್ನಿಯಲ್ಲಿ ಭಾಗವಹಿಸುವ ಸಲುವಾಗಿ ಹಂಬೋಲ್ಟ್ ಬ್ರಾಂಕೋಸ್ ಜೂನಿಯರ್ಸ್ ಹಾಕಿ ತಂಡ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. 
ಆಟಗಾರರೆಲ್ಲಾ 16 ರಿಂದ 21 ವರ್ಷದ ವಯೋಮಿತಿಯವರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.