ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ: ಗುರುರಾಜ್ ಗೆ 25 ಲಕ್ಷ ರು ನಗದು, ಸರ್ಕಾರಿ ಉದ್ಯೋಗ
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 56 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ ಪೂಜಾರಿ ಅವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಕ್ರೀಡಾ ಸಚಿವ ...

Published On :
ಉಡುಪಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 56 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ ಪೂಜಾರಿ ಅವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಗುರುರಾಜ್ ಅವರ ವಿದ್ಯಾರ್ಹತೆ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಅವರಿಗೆ ಸರ್ಕಾರಿ ಉದ್ಯೋಗ ದೊರಕಿಸಿಕೊಡುವ ಸುಳಿವು ನೀಡಿದ್ದಾರೆ,
ಜೊತೆಗೆ ಗುರುರಾಜ್ ಅವರಿಗೆ 25 ಲಕ್ಷ ರು. ನಗದು ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ, ಇತ್ತೀಚೆಗೆ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಕ್ರೀಡಾ ಪಾಲಿಸಿ ಪ್ರಕಾರ ಗುರುರಾಜ್ ಅವರಿಗೆ ಕೆಲಸ ಸಿಗಲಿದೆ ಎಂದು ತಿಳಿಸಿದ್ದಾರೆ.
ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ಗುರುರಾಜ ಪೂಜಾರಿ ಅವರ ಸಾಧನೆ ಬಗ್ಗೆ ನನಗೆ ಹೆಮ್ಮೆಯಾಗುತ್ತದೆ. ಇತ್ತೀಚೆಗೆ ಗುರುರಾಜ ಅವರಿಗೆ ಕರ್ನಾಟಕ ಏಕಲವ್ಯ ಪ್ರಶಸ್ತಿ ನೀಡಿದೆ, ಇಂಡಿಯಾ ಹೆಮ್ಮೆ ಪಡುವಂತೆ ಮಾಡಿದ ಗುರುರಾಜ್ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Government Jobsilver medalಸರ್ಕಾರಿ ಉದ್ಯೋಗCommonwealth Gamesಕಾಮನ್ ವೆಲ್ತ್ ಗೇಮ್ಸ್ಬೆಳ್ಳಿಪದಕGururaja Poojaryಗುರುರಾಜ ಪೂಜಾರಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


