ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ಹೀನಾ ಸಿಧು ಸಾಧನೆ; ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಹೀನಾ ಸಿಧು ಅಗ್ರ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್: ಹೀನಾ ಸಿಧು ಸಾಧನೆ; ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ
ಚಿನ್ನ ಗೆದ್ದ ಹೀನಾ ಸಿಂಧು
Published On :
ಗೋಲ್ಡ್ ಕೋಸ್ಟ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಹೀನಾ ಸಿಧು ಅಗ್ರ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ.
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಇಂದು ನಡೆದ ಮಹಿಳೆಯರ 25 ಮೀಟರ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಹೀನಾ ಸಿಧು ಚಿನ್ನದ ಬದಕ ಬಾಚಿದ್ದಾರೆ. ಪ್ರಿಸೆಷನ್ ಮತ್ತು ರ್ಯಾಪಿಡ್ ಹಂತದಗಳಲ್ಲಿ ತಲಾ 286 ಮತ್ತು 293 ಅಂಕಗಳಿಸಿದ ಹೀನಾ ಸಿಧು ಒಟ್ಟು 579 ಅಂಕಗಳಿಸುವ ಮೂಲಕ ಅಗ್ರ ಸ್ಥಾನಕ್ಕೇರಿದರು. ಅಂತಿಮ ಹಂತದಲ್ಲಿ ದಾಖಲೆಯ 38 ಅಂಕಗಳಿಸಿ ಚಿನ್ನದ ಪದಕಕ್ಕೆ ಭಾಜನರಾದರು. ಹೀನಾ ಸಿಧುಗೆ ಇದು 2ನೇ ಕಾಮನ್ ವೆಲ್ತ್ ಪದಕವಾಗಿದೆ.
ಹೀನಾ ಸಿಧು ಅವರ ಚಿನ್ನದ ಪದಕದ ಮೂಲಕ ಭಾರತದ ಚಿನ್ನದ ಪದಕ ಗಳಿಕೆ 11ಕ್ಕೇರಿದ್ದು, ಅಂತೆಯೇ ಪದಕ ಪಟ್ಟಿಯಲ್ಲಿ ಭಾರತದ ಮೂರನೇ ಸ್ಥಾನ ಮತ್ತಷ್ಟು ಭದ್ರವಾಗಿದೆ. ಮೂರನೇ ಸ್ಥಾನಕ್ಕೆ ತಲಾ 8 ಚಿನ್ನದ ಪದಕ ಗಳಿಸಿರುವ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತೀವ್ರ ಪೈಪೋಟಿ ನೀಡುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.