ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2018: ಕುಸ್ತಿಯಲ್ಲಿ ಚಿನ್ನ ಗೆದ್ದ ರಾಹುಲ್ ಅವಾರೆ, ಬಬಿತಾ ಕುಮಾರಿಗೆ ಬೆಳ್ಳಿ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು ಭಾರತದ ಖಾತೆಗೆ...

ಕಾಮನ್ವೆಲ್ತ್ ಗೇಮ್ಸ್ 2018: ಕುಸ್ತಿಯಲ್ಲಿ ಚಿನ್ನ ಗೆದ್ದ ರಾಹುಲ್ ಅವಾರೆ, ಬಬಿತಾ ಕುಮಾರಿಗೆ ಬೆಳ್ಳಿ
ರಾಹುಲ್ ಅವಾರೆ, ಬಬಿತಾ ಕುಮಾರಿ
Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು ಭಾರತದ ಖಾತೆಗೆ ಮತ್ತೊಂದು ಚಿನ್ನದ ಪದಕ ಸೇರ್ಪಡೆಯಾಗಿದೆ. 
ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ರಾಹುಲ್ ಅವಾರೆ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಇನ್ನು ಮಹಿಳೆಯರ ಕುಸ್ತಿ ವಿಭಾಗದಲ್ಲಿ ಬಬಿತಾ ಕುಮಾರಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿದ್ದಾರೆ. 
ಪುರುಷರ 57 ಕೆಜಿ ವಿಭಾಗದಲ್ಲಿ ರಾಹುಲ್ ಅವಾರೆ ಅವರು ಕೆನೆಡಾದ ಸ್ಟೀವನ್ ತಕಹಶಿ ಅವರನ್ನು 3-1ರಿಂದ ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇನ್ನು 53 ಕೆಜಿ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಬಬಿತಾ ಕುಮಾರಿ ಅವರು ಕೆನಡಾದ ಡಯಾನ ವೀಕರ್ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.