ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2018: ಶೂಟಿಂಗ್‌ನಲ್ಲಿ ತೇಜಸ್ವಿನಿ ಸಾವಂತ್‌ಗೆ ಬೆಳ್ಳಿ ಪದಕ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು ಗುರುವಾರ ಮಹಿಳೆಯರ...

ಕಾಮನ್ವೆಲ್ತ್ ಗೇಮ್ಸ್ 2018: ಶೂಟಿಂಗ್‌ನಲ್ಲಿ ತೇಜಸ್ವಿನಿ ಸಾವಂತ್‌ಗೆ ಬೆಳ್ಳಿ ಪದಕ
ತೇಜಸ್ವಿನಿ ಸಾವಂತ್‌
Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು, ಗುರುವಾರ ಮಹಿಳೆಯರ 50ಎಂ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಭಾರತದ ತೇಜಸ್ವಿನಿ ಸಾವಂತ್ ಬೆಳ್ಳಿ ಪದಕ ಗೆದ್ದಿದ್ದಾರೆ. 
ಬೆಲ್ಮಾಟ್ ಶೂಟಿಂಗ್ ಸೆಂಟರ್ ನಲ್ಲಿ ಇಂದು ನಡೆದ ಮಹಿಳೆಯರ 50ಎಂ ರೈಫಲ್ ಪ್ರೋನ್ ಶೂಟಿಂಗ್ ನ ಅಂತಿಮ ಸ್ಪರ್ಧೆಯಲ್ಲಿ ಭಾರತದ ತೇಜಸ್ವಿನಿ ಸಾವಂತ್ ಒಟ್ಟು 618.9 ಅಂಕಗಳನ್ನು ಸಂಪಾದಿಸುವ ಮೂಲಕ ಎರಡನೇ ಸ್ಥಾನಕ್ಕೇರಿ ಬೆಳ್ಳಿ ಪದಕ ಗಳಿಸಿದರು. 
ಕಾಮನ್ವೆಲ್ತ್ ಗೇಮ್ಸ್ 2018ರಲ್ಲಿ ಭಾರತ ಇಲ್ಲಿಯವರೆಗೂ 12 ಚಿನ್ನ, 5 ಬೆಳ್ಳಿ ಮತ್ತು 8 ಕಂಚಿನ ಪದಕ ಮೂಲಕ ಒಟ್ಟು 25 ಪದಕಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.