ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ಮಹಿಳೆಯರ ಟೇಬಲ್ ಟೆನ್ನಿಸ್ ಡಬಲ್ಸ್, ಭಾರತಕ್ಕೆ ಬೆಳ್ಳಿ ಪದಕ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶುಕ್ರವಾರ ನಡೆದ ಮಹಿಳೆಯರ ಟೇಬಲ್ ಟೆನ್ನಿಸ್ ನ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ.

ಕಾಮನ್ ವೆಲ್ತ್ ಕ್ರೀಡಾಕೂಟ: ಮಹಿಳೆಯರ ಟೇಬಲ್ ಟೆನ್ನಿಸ್ ಡಬಲ್ಸ್, ಭಾರತಕ್ಕೆ ಬೆಳ್ಳಿ ಪದಕ
ಭಾರತದ ಮನಿಕಾ ಬತ್ರಾ ಮತ್ತು ಮೌರ್ನಾ ದಾಸ್ ಜೋಡಿ
Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶುಕ್ರವಾರ ನಡೆದ ಮಹಿಳೆಯರ ಟೇಬಲ್ ಟೆನ್ನಿಸ್ ನ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ.
ಇಂದು ನಡೆದ ಪೈನಲ್ ಪಂದ್ಯದಲ್ಲಿ ಭಾರತದ ಮನಿಕಾ ಬತ್ರಾ ಮತ್ತು ಮೌರ್ನಾ ದಾಸ್ ಜೋಡಿ ಸಿಂಗಾಪುರದ ಫೆಂಗ್ ಟಿಯಾನ್ವೀ ಮತ್ತು ಯು ಮೆಂಗ್ಯು ವಿರುದ್ಧ ಸೋಲು ಕಾಣುವ ಮೂಲಕ ಚಿನ್ನದ ಪದಕದ ಆಸೆ ಕೈ ಬಿಟ್ಟರು. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಮನಿಕಾ ಬತ್ರಾ ಮತ್ತು ಮೌರ್ನಾ ದಾಸ್ ಜೋಡಿ 11-5, 11-4 ಮತ್ತು 11-5 ನೇರ ಸೆಟ್ ಸೋಲು ಕಾಣುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾದರು.
ಇನ್ನು ಈ ಬೆಳ್ಳಿ ಪದಕಗಳ ಮೂಲಕ ಭಾರತದ ಪದಕಗಳಿಕೆ 42ಕ್ಕೆ ಏರಿಕೆಯಾಗಿದ್ದು, ಈ ಪೈಕಿ 17 ಚಿನ್ನ, 11 ಬೆಳ್ಳಿ ಹಾಗೂ 24 ಕಂಚಿನ ಪದಕಗಳು ಸೇರಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.