ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ರೆಸ್ಲಿಂಗ್ ನಲ್ಲಿ ಭಾರತಕ್ಕೆ ಮತ್ತೆ ಮೂರು ಪದಕ, ಚಿನ್ನ ಗೆದ್ದ ಭಜರಂಗ್ ಪುನಿಯಾ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶುಕ್ರವಾರ ಶುಭವಾಗಿ ಪರಿಣಮಿಸಿದ್ದು, ಪುರುಷರ 65 ಕೆಜಿ ವಿಭಾಗದ ರೆಸ್ಲಿಂಗ್ ಸ್ಪರ್ಧೆಯಲ್ಲಿ ಭಾರತದ ಭಜರಂಗ್ ಪುನಿಯಾ ಚಿನ್ನದ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟ: ರೆಸ್ಲಿಂಗ್ ನಲ್ಲಿ ಭಾರತಕ್ಕೆ ಮತ್ತೆ ಮೂರು ಪದಕ, ಚಿನ್ನ ಗೆದ್ದ ಭಜರಂಗ್ ಪುನಿಯಾ
ಸಂಗ್ರಹ ಚಿತ್ರ
Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶುಕ್ರವಾರ ಶುಭವಾಗಿ ಪರಿಣಮಿಸಿದ್ದು,  ಪುರುಷರ 65 ಕೆಜಿ ವಿಭಾಗದ ರೆಸ್ಲಿಂಗ್ ಸ್ಪರ್ಧೆಯಲ್ಲಿ ಭಾರತದ ಭಜರಂಗ್ ಪುನಿಯಾ ಚಿನ್ನದ ಪದಕ ಗೆದ್ದಿದ್ದಾರೆ.
ಪುರುಷರ 65 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಭಜರಂಗ್ ಪುನಿಯಾ ವೇಲ್ಸ್ ನ ಕೇನ್ ಚಾರಿಗ್ ರನ್ನು 8-0 ಅಂತರದಲ್ಲಿ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇನ್ನು ಮಹಿಳೆಯರ ರೆಸ್ಲಿಂಗ್ ವಿಭಾಗದಲ್ಲಿ ಭಾರತದ ಪೂಜಾ ದಂಡಾ ಬೆಳ್ಳಿ ಗೆದ್ದಿದ್ದು, ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಒಡುನಯೋ ಅವರನ್ನು 7-5ರಲ್ಲಿ ಮಣಿಸಿ ಎರಡನೇ ಸ್ಥಾನಕ್ಕೇರಿ ಬೆಳ್ಳಿ ಪದಕ ಪಡೆದಿದ್ದಾರೆ.
ಇನ್ನು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತದ ದಿವ್ಯಾ ಕಕ್ರನ್ ಬಾಂಗ್ಲಾದೇಶದ ಶೆರಿನ್ ಸುಲ್ತಾನಾ ಅವರನ್ನು ಮಣಿಸುವ ಮೂಲಕ ಕಂಚಿನ ಪದಕ ಪಡೆದಿದ್ದಾರೆ. 
ಈ ಮೂರು ಪದಕಗಳ ಮೂಲಕ ಟೂರ್ನಿಯಲ್ಲಿ ಭಾರತದ ಪದಕ ಗಳಿಕೆ 38ಕ್ಕೆ ಏರಿಕೆಯಾಗಿದ್ದು, ಈ ಪೈಕಿ 17 ಚಿನ್ನ, 9 ಬೆಳ್ಳಿ ಹಾಗೂ 12 ಕಂಚಿನ ಪದಕಗಳು ಸೇರಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.