ಕಾಮನ್ವೆಲ್ತ್ ಗೇಮ್ಸ್: ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮಣಿಕಾ ಬಾತ್ರಾ
21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಶನಿವಾರ ಟೇಬಲ್ ಟೆನಿಸ್ ಸಿಂಗಲ್ಸ್...

Published On :
ಗೋಲ್ಡ್ ಕೋಸ್ಟ್: 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಶನಿವಾರ ಟೇಬಲ್ ಟೆನಿಸ್ ಸಿಂಗಲ್ಸ್ ವಿಭಾಗದಲ್ಲಿ ನಲ್ಲಿ ಮಣಿಕಾ ಬಾತ್ರಾ ಅವರು ಚಿನ್ನಕ್ಕೆ ಮುತ್ತಿಕ್ಕಿದರು. ಈ ಮೂಲಕ ಟೇಬಲ್ ಟೆನಿಸ್ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಮಹಿಳಾ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಮಣಿಕಾ ಬಾತ್ರಾ ಅವರು ಸಿಂಗಾಪುರದ ಯು ಮೆಂಗ್ಯು ಅವರನ್ನು 4-0 ಅಂತರದಿಂದ ಸೋಲಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದರು.
ನಿನ್ನೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮಣಿಕಾ ಬಾತ್ರಾ ವಿಶ್ವದ 4ನೇ ಶ್ರೇಯಾಂಕಿತ ಆಟಗಾರ್ತಿ ಫೆಂಗ್ ಟಿಯಾನ್ವಿ ವಿರುದ್ಧ 4–3ರಲ್ಲಿ ನಿರ್ಣಾಯಕ ಗೆಲುವು ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


