ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್: ಪ್ರಿ ಕ್ವಾರ್ಟರ್ ಹಂತ ತಲುಪಿದ ಪಿವಿ ಸಿಂಧೂ
ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧೂ ಇಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಮಹಿಳಾ ಸಿಂಗಲ್ಸ್ ವಿಭಾಗದ ಪ್ರಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.

Published On :
ನಾನ್ಜಿಂಗ್ (ಚೀನಾ): ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧೂ ಇಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಮಹಿಳಾ ಸಿಂಗಲ್ಸ್ ವಿಭಾಗದ ಪ್ರಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಇಂಡೋನೇಷ್ಯಾದ ಫಿಟ್ರಿಯಾನಿ ವಿರುದ್ಧ 21-14, 21-9 ಅಂತರದಲ್ಲಿ ಜಯ ಸಾಶಿಸಿ ಸಿಂಧೂ ಮುಂದಿನ ಸುತ್ತಿಗೆ ಪ್ರವೇಶ ಗಿಟ್ಟಿಸಿದರು.
ಪ್ರಾರಂಭದಿಂದಲೂ ಉತ್ತಮ ಆಟ ಪ್ರದರ್ಶಿಸಿದ್ದ ಸಿಂಧೂ ಎದುರಾಳಿಯನ್ನು ಹಿಮ್ಮೆಟ್ಟಿಸುತ್ತಾ ಸಾಗಿದ್ದಲ್ಲದೆ ಅಂತಿಮವಾಗಿ ಜಯ ತನ್ನದಾಗಿಸಿಕೊಂಡರು.
ಮುಂದಿನ ಸುತ್ತಿನಲ್ಲಿ ಸಿಂಧೂ ಸೌತ್ ಕೊರಿಯಾ ಆಟಗಾರ್ತಿ ಸುಂಗ್ ಜಿ ಹ್ಯುನ್ ಅವರೊಡನೆ ಸೆಣೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PV Sindhuಪಿವಿ ಸಿಂಧುBadminton World Championshippre quarter finalಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್ಪ್ರಿ ಕ್ವಾರ್ಟರ್ ಫೈನಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


