ಕ್ರೀಡೆ

ಏಷ್ಯನ್ ಕ್ರೀಡಾಕೂಟ: ಚಿನ್ನ ಗೆದ್ದು ಇತಿಹಾಸ ಬರೆದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್

ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಏಷ್ಯನ್ ಕ್ರೀಡಾಕೂಟ: ಚಿನ್ನ ಗೆದ್ದು ಇತಿಹಾಸ ಬರೆದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್
ವಿನೇಶ್ ಪೋಗಟ್
Published On :
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಏಷ್ಯನ್ ಗೇಮ್ಸ್ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ಕುಸ್ತಿ ವಿಭಾಗದಲ್ಲಿ ವಿನೇಶ್ ಚಿನ್ನದ ಪದಕ ಗಳಿಸಿದ್ದಾರೆ.
ಜಪಾನ್ ನ ಯೂಕಿ ಐರೀ ವಿರುದ್ಧ ವಿನೇಶ್ ಪೋಗಟ್ ಮೊದಲ ಸುತ್ತಿನಲ್ಲಿ 4-0 ಮುನ್ನಡೆ ಸಾಧಿಸಿದರೆ ಅಂತಿಮವಾಗಿ  6-2 ಅಂತರದ ಗೆಲುವು ಸಾಧಿಸಿದ್ದಾರೆ.
ಈ ಮುಖೇನ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ ಮೊದಲ ಮಹಿಳಾ ಕುಸ್ತಿಪಟುವಾಗಿ ವಿನೇಶ್ ಪೋಗಟ್ ದಾಖಲೆ ಬರೆದರು.
ಇನ್ನು ಇದೇ ವಿಬಾಗದಲ್ಲಿ ಸಾಕ್ಷಿ ಮಲಿಕ್, ಪೂಜಾ ಧಂಡಾ ಮತ್ತು ಸುಮಿತ್ ಮಲಿಕ್ ಅವರು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ.
ಕ್ರೀಡಾಕೂಟದಲ್ಲಿ ಭಾರತ ಒಟ್ಟಾರೆ ಐದು ಪದಕ ಗಳಿಸಿದ್ದು ಇದರಲ್ಲಿ ಎರಡು ಚಿನ್ನ, ಎರಡು ಬೆಳ್ಳಿ ಹಾಗೂ ಒಂದು ಕಂಚು ಸೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.