ಏಷ್ಯನ್ ಗೇಮ್ಸ್ ಕ್ರೀಡಾಕೂಟ: 2ನೇ ದಿನದ ಆರಂಭದಲ್ಲೇ ಭಾರತಕ್ಕೆ ಮತ್ತೊಂದು ಪದಕ
ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆಯನ್ನು ಮುಂದುವರೆದಿದ್ದು, 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ.

Published On :
ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆಯನ್ನು ಮುಂದುವರೆದಿದ್ದು, 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ.
ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ದೀಪಕ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ. 249.1 ಅಂಕಗಳೊಂದಿಗೆ ಚೀನಾದ ಯಾಂಗ್ ಹರಾನ್ ಅಗ್ರ ಸ್ಥಾನಿಯಾಗಿ ಚಿನ್ನದ ಪದಕ ಗೆದ್ದರೆ, 247.7 ಅಂಕಗಳೊಂದಿಗೆ ದೀಪಕ್ ಕುಮಾರ್ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರು.
ನಿನ್ನೆಯಷ್ಟೇ ಭಾರತದ ಮತ್ತೊಬ್ಬ ಶೂಟರ್ ರವಿಕುಮಾರ್ ಮಿಶ್ರಾ 10 ಮೀಟರ್ ರೈಫಲ್ ವಿಭಾಗದಲ್ಲಿ ಅಪೂರ್ವಿ ಚಂಡೇಲಾರೊಂದಿಗೆ ಕಂಚಿನ ಪದಕ ಗೆದ್ದಿದ್ದರು.
What a start to day 2 of the #AsianGames2018 !
With his eyes set on the target from the beginning, our shooter and #TOPSAthlete,Deepak Kumar, just grabbed a
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


