ಏಷ್ಯನ್ ಗೇಮ್ಸ್ 2018: ಮುಂದುವರೆದ ಭಾರತೀಯರ ಪದಕ ಬೇಟೆ, ಶೂಟರ್ ಸೌರಭ್ ಚೌಧರಿಗೆ ಬೆಳ್ಳಿ
ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 10ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಹಾಗೂ ಅಭಿಶೇಕ್...

Published On :
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 10ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಹಾಗೂ ಅಭಿಶೇಕ್ ಕಂಚಿನ ಪದಕ ಗೆದ್ದಿದ್ದು ಇದೀಗ ಸಂಜೀವ್ 50ಎಂ ರೈಫಲ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಬೆನ್ನಲ್ಲೇ 10ಎಂ ಏರ್ ಪಿಸ್ತೂಲ್‍ನಲ್ಲಿ ಸೌರಭ್ ಚೌಧರಿ ಚಿನ್ನಕ್ಕೆ ಮುತ್ತಿಟ್ಟಿದ್ದರು.
37 ವರ್ಷದ ಸಂಜೀವ್ ರತಪೂತ್ ಅವರು 452.7 ಅಂಕ ಗಳಿಸಿ ಬೆಳ್ಳಿ ಗೆದ್ದರೆ, ಚೀನಾದ ಹುಯಿ ಜಿಚಾಂಗ್ 453.3 ಅಂಗಳೊಂದಿಗೆ ಚಿನ್ನದ ಪದಕಕ್ಕೆ ಮುಟ್ಟಿತ್ತಿದ್ದಾರೆ.
ಪುರುಷರ 10ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಗೆದ್ದರೆ ಅಭಿಶೇಕ್ ಕಂಚಿನ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸದ್ಯ ಭಾರತ 3 ಚಿನ್ನ, 3 ಬೆಳ್ಳಿ ಮತ್ತು 2 ಕಂಚು ಪದಕ ಗೆದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


