ಏಷ್ಯನ್ ಗೇಮ್ಸ್ 2018: ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಬೆಳ್ಳಿ
ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯ ಆರನೇ ದಿನ ಸಹ ಭಾರತ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿಸಿದ್ದಲ್ಲದೆ ಪದಕ ಬೇಟೆಯನ್ನು ಮುಂದುವರಿಸಿದೆ.

Published On :
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯ ಆರನೇ ದಿನ ಸಹ ಭಾರತ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿಸಿದ್ದಲ್ಲದೆ ಪದಕ ಬೇಟೆಯನ್ನು ಮುಂದುವರಿಸಿದೆ. ಇದರ ನಡುವೆ ಭಾರತ ಮಹಿಳಾ ಕಬಡ್ಡಿ ತಂಡ ಫೈನಲ್ಸ್ ನಲ್ಲಿ ಸೋತು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದೆ.
ಇರಾನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಮಹಿಳೆಯರು 27-24 ಅಂತರದ ಸೋಲನುಭವಿಸಿದ್ದಾರೆ.
ಈ ಮೂಲಕ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಪುರುಷರ ಅಥವಾ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆಲ್ಲಲು ವಿಫಲವಾಗಿದೆ.
ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 6 ಚಿನ್ನ, 5 ಬೆಳ್ಳಿ, 13 ಕಂಚಿನ ಪದಕಗಳನ್ನು ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


