ಏಷ್ಯನ್ ಗೇಮ್ಸ್ 2018: ಮಹಿಳಾ ಸ್ಕ್ವ್ಯಾಷ್'ನಲ್ಲಿ ದೀಪಿಕಾಗೆ ಕಂಚು
18ನೇ ಏಷ್ಯನ್ ಗೇಮ್ಸ್ ಮಹಿಳಾ ಸಿಂಗಲ್ಸ್ ಸ್ಕ್ವ್ಯಾಷ್'ನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಶನಿವಾರ ಕಂಚು ಗೆದ್ದಿದ್ದಾರೆ...

Published On :
ಜಕಾರ್ತಾ: 18ನೇ ಏಷ್ಯನ್ ಗೇಮ್ಸ್ ಮಹಿಳಾ ಸಿಂಗಲ್ಸ್ ಸ್ಕ್ವ್ಯಾಷ್'ನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಶನಿವಾರ ಕಂಚು ಗೆದ್ದಿದ್ದಾರೆ.
ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್'ನ 7ನೇ ದಿನದ ಮಹಿಳಾ ಸಿಂಗಲ್ಸ್ ಸ್ಕ್ವ್ಯಾಷ್ ಸಿಂಗಲ್ ಸೆಮಿಫೈಲನ್ಸ್ ನಲ್ಲಿ ದೀಪಿಕಾ ಅವರು, ಮಲೇಷ್ಯಾ ಆಟಗಾರ್ತಿ ನಿಕೋಲ್ ಡೇವಿಡ್ ವಿರುದ್ಧ ಸೋತಿದ್ದರಿಂದ ಕಂಚಿಗೆ ತೃಪ್ತಿಪಟ್ಟುಕೊಳ್ಳುವಂತಾಯಿತು.
ದೀಪಿಕಾ ಅವರ ಕಂಚಿನ ಪದಕದೊಂದಿಗೆ ಭಾರತದ ಪದಕ ಪಟ್ಟಿಯಲ್ಲಿ ಒಟ್ಟು 26 ಪದಕಗಳು ಸೇರ್ಪಡೆಗೊಂಡಿದ್ದು, ಭಾರತ ಪದಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ನಿನ್ನೆ ನಡೆದ ಪುರುಷರ ಟೆನಿಸ್ ಡಬಲ್ಸ್ ಫೈನಲ್ ನಲ್ಲಿ ಭಾರತದ ಬೋಪಣ್ಣ-ಶರಣ್ ಜೋಡಿ ಕಜಕಿಸ್ತಾನದ ಅಲೆಕ್ಸಾಂಡರ್ ಬುಬ್ಲಿಕ್-ಡೆನಿಸ್ ಯೆವ್ಸೇವ್ ಜೋಡಿಯನ್ನು 6-3, 6-4ರ ನೇರ ಸೆಟ್'ನಿಂದ ಸೋಲಿಸಿ ಚಿನ್ನದ ಪದಕ ಗೆದ್ದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bronzeಕಂಚುAsian Games 2018. Dipika PallikalWomens squashಏಷ್ಯನ್ ಗೇಮ್ಸ್ 2018ಸ ದೀಪಿಕಾ ಪಳ್ಳಿಕಲ್ಮಹಿಳಾ ಸ್ಕ್ವ್ಯಾಷ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


