ಏಷ್ಯನ್ ಗೇಮ್ಸ್ 2018: ಬೆಳ್ಳಿಗೆ ಮುತ್ತಿಟ್ಟ ಭಾರತದ ಆರ್ಚರಿ ವನಿತೆಯರು!
ಜಕಾರ್ತದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಡದಲ್ಲಿ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದ್ದು ಆರ್ಚರಿಯಲ್ಲಿ ಭಾರತೀಯ ವನಿತೆಯರ ತಂಡ ಬೆಳ್ಳಿಗೆ ಮುತ್ತಿಟ್ಟಿದ್ದಾರೆ...

Published On :
ಜಕಾರ್ತದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಡದಲ್ಲಿ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದ್ದು ಆರ್ಚರಿಯಲ್ಲಿ ಭಾರತೀಯ ವನಿತೆಯರ ತಂಡ ಬೆಳ್ಳಿಗೆ ಮುತ್ತಿಟ್ಟಿದ್ದಾರೆ.
ದಕ್ಷಿಣ ಕೋರಿಯಾದ ವಿರುದ್ಧ ಭಾರತೀಯ ಆರ್ಚರಿ ವನಿತೆಯರ ತಂಡ 228-231 ಅಂಕಗಳು, ಅಂದರೆ ಮೂರು ಅಂಕಗಳ ಅಂತರದಿಂದ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಆರ್ಚರಿ ವನಿತೆಯರ ತಂಡ ತೈವಾನ್ ತಂಡದ ವಿರುದ್ಧ 225-222 ಅಂಕಗಳೊಂದಿಗೆ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದರು.
ಏಷ್ಯನ್ ಗೇಮ್ಸ್ 2018ರಲ್ಲಿ ಭಾರತ ಪ್ರಸಕ್ತ 8 ಚಿನ್ನ, 15 ಬೆಳ್ಳಿ ಹಾಗೂ 20 ಕಂಚಿನ ಪದಕಗಳೊಂದಿಗೆ ಒಟ್ಟಾರೆ 43 ಪದಕಗಳನ್ನು ಗೆದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


