100 ಮೀಟರ್ ಓಟದಲ್ಲಿ ಡುಟೀ ಚಾಂದ್ ಗೆ ಬೆಳ್ಳಿ ಪದಕ
ಏಷ್ಯನ್ ಗೇಮ್ಸ್ ನ ಮಹಿಳಾ ವಿಭಾಗದ 100 ಮೀಟರ್ ಓಟದಲ್ಲಿ ಎರಡನೇ ಸ್ಥಾನ ಪಡೆದಿರುವ ಡುಟೀ ಚಾಂದ್ ಬೆಳ್ಳಿ ಪದಕ ಗೆದ್ದಿದ್ದಾರೆ.

Published On :
ಏಷ್ಯನ್ ಗೇಮ್ಸ್ ನ ಮಹಿಳಾ ವಿಭಾಗದ 100 ಮೀಟರ್ ಓಟದಲ್ಲಿ ಎರಡನೇ ಸ್ಥಾನ ಪಡೆದಿರುವ ಡುಟೀ ಚಾಂದ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ ನಲ್ಲಿ ಎರಡಕ್ಕಿಂತ ಹೆಚ್ಚು ಪದಕ ಗೆದ್ದಿರುವ ಭಾರತೀಯ ಅಥ್ಲೀಟ್ ಗಳ ಪಟ್ಟಿಗೆ ಈಗ ಡುಟೀ ಚಾಂದ್ ಕೂಡಾ ಸೇರ್ಪಡೆಯಾಗಿದ್ದಾರೆ. ಡುಟೀ ಚಾಂದ್ 23.20 ಸೆಕೆಂಡ್ಸ್ ನಲ್ಲಿ ನಿಗದಿತ ಗುರಿಯನ್ನು ಮುಟ್ಟುವ ಮೂಲಕ ಎರಡನೇ ಸ್ಥಾನ ಗಳಿಸಿದ್ದರೆ 22.96 ಸೆಕೆಂಡ್ ಗಳಲ್ಲಿ ನಿಗದಿತ ಗುರಿಯನ್ನು ತಲುಪಿದ ಬಹ್ರೇನ್ನ ಎಡಿಡಿಯೋಂಗ್ ಓಡಿಯಾಂಗ್ ಚಿನ್ನದ ಪದಕ ಗೆದ್ದಿದ್ದಾರೆ, ಕಂಚಿನ ಪದಕ ಚೀನಾದ ವೈ ಯೊಂಗ್ಲಿ ಪಾಲಾಗಿದೆ.
ಹೈಪರ್ ಆಂಡ್ರೊಜೆನಿಜಮ್ ಅಂಶ ಜಾಸ್ತಿಯಾಗಿದ್ದ ಕಾರಣ ಒಡಿಶಾದ 22 ವರ್ಷದ ಅಥ್ಲೀಟ್ ಡುಟೀ ಚಾಂದ್ ಗೆ 2014 ರ ಕಾಮನ್ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರಲಿಲ್ಲ. ನಂತರ ಕೋರ್ಟ್ ನಲ್ಲಿ ಕಾನೂನು ಸಮರ ಎದುರಿಸಿದ್ದ ಡುಟಿ ಚಾಂದ್ ಐಎಎಎಫ್ ನ ನಿಯಮಗಳನ್ನು ಪ್ರಶ್ನಿಸಿದ್ದರು. ಕಾನೂನು ಸಮರದ ನಂತರ ಪರಿಷ್ಕರಣೆಗೊಂಡ ನಿಯಮಗಳಿಗೆ ಅನುಗುಣವಾಗಿ ಡುಟೀ ಚಾಂದ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಾಧ್ಯವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


