ಏಷ್ಯನ್ ಗೇಮ್ಸ್: ಮಹಿಳೆಯರ 4x400 ಮೀ. ರಿಲೇಯಲ್ಲಿ ಭಾರತಕ್ಕೆ ಚಿನ್ನ
ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರ ಕ್ರೀಡಾಕೂಟದಲ್ಲಿ ಮಹಿಳೆಯರ 4x400 ಮೀಟರ್ ರಿಲೇ....

Published On :
ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರ ಕ್ರೀಡಾಕೂಟದಲ್ಲಿ ಮಹಿಳೆಯರ 4x400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತ ಸತತ ಐದನೇ ಬಾರಿ ಚಿನ್ನ ಗೆದ್ದುಕೊಂಡಿದೆ.
ಹಿಮಾ ದಾಸ್, ಎಂ.ಆರ್ ಪೂವಮ್ಮ, ಎಸ್ ಗಾಯಕ್ವಾಡ್ ಮತ್ತು ಮಿಸ್ಮಯ ಕೊರೊತ್ ಅವರನ್ನೊಳಗೊಂಡ ಭಾರತದ ತಂಡ, 3:28.72 ನಿಮಿಷಗಳಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಗುರಿ ತಲುಪುವ ಮೂಲಕ ಚಿನ್ನಕ್ಕೆ ಮುತ್ತಿಕ್ಕಿದ್ದರು. ಇದರೊಂದಿಗೆ ಭಾರತದ ಚಿನ್ನದ ಪದಕಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಮಹಿಳೆಯರ ತಂಡ, 4x400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಸತತವಾಗಿ ಐದನೇ ಬಾರಿಗೆ ಚಿನ್ನದ ಪದಕವನ್ನು ಬಾಚಿಕೊಂಡಿದೆ.
4x400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಬಹ್ರೇನ್ ಬೆಳ್ಳಿ ಪದಕ ಹಾಗೂ ವಿಯೆಟ್ನಾಂ ಕಂಚಿನ ಪದಕಕ್ಕೆ ತೃಪ್ತಿಪಟ್ಟಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


