ಇತಿಹಾಸದಲ್ಲೇ ಮೊದಲ ಬಾರಿಗೆ ಒಲಿಂಪಿಕ್ಸ್ ಆಯೋಜನೆಗೆ ಅವಕಾಶ ಕೋರಿದ ಭಾರತ!
ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ದೇಶದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ.

Published On :
ನವದೆಹಲಿ: ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ದೇಶದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ.
ದೇಶಕ್ಕೆ ಒಲಿಂಪಿಕ್ ಕ್ರೀಡಾ ಕೂಟವನ್ನು ತರುವತ್ತ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ದಾಪುಗಾಲು ಇಟ್ಟಿದ್ದು, ಇದೇ ಮೊದಲ ಬಾರಿಗೆ ಮಹಾ ಕ್ರೀಡಾಕೂಟದ ಆಯೋಜನೆಗೆ ಅವಕಾಶ ನೀಡುವಂತೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಯಲ್ಲಿ ಮನವಿ ಮಾಡಿಕೊಂಡಿದೆ.
ಮೂಲಗಳ ಪ್ರಕಾರ 2032ರ ಒಲಿಂಪಿಕ್ ಕ್ರೀಡಾ ಕೂಟ ಆಯೋಜನೆಯ ಅವಕಾಶವನ್ನು ಭಾರತಕ್ಕೆ ನೀಡುವಂತೆ ಕೋರಿಕೆ ಸಲ್ಲಿಸಿರುವ ಐಒಎ ಇದಕ್ಕಾಗಿ ಭಾರತದ ಸರ್ಕಾರದ ಸಹಕಾರ ಕೂಡ ಕೋರಿದೆ. ಭಾರತಕ್ಕೆ ಅವಕಾಶ ನೀಡುವ ಕುರಿತು ಐಒಎ ಅಧ್ಯಕ್ಷ ನರಿಂದರ್ ಬಾತ್ರ ನೀಡಿದ ಸಲಹೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ(ಐಒಸಿ) ಮುಖ್ಯಸ್ಥ ಥಾಮಸ್ ಬ್ಯಾಚ್ ಅವರೂ ಸ್ವಾಗತಿಸಿದ್ದಾರೆ ಎನ್ನಲಾಗಿದೆ.
'ಭಾರತದಲ್ಲಿ 2032ರ ಒಲಿಂಪಿಕ್ ಆಯೋಜಿಸುವ ಬಗ್ಗೆ ನಾವು ತುಂಬಾ ಗಂಭೀರವಾಗಿ ಯೋಚಿಸುತ್ತಿದ್ದೇವೆ. ಕ್ರೀಡಾ ಕೂಟ ಆಯೋಜಿಸುವ ವಿಚಾರದಲ್ಲಿ ನಮಗಿರುವ ಆಸಕ್ತಿಯ ಬಗ್ಗೆ ನಾವು ಐಒಸಿಗೆ ಪತ್ರದ ಮೂಲಕ ತಿಳಿಸಿದ್ದೇವೆ. ಒಲಿಂಪಿಕ್ ಬಿಡ್ ಸಮಿತಿಯೊಂದಿಗೆ ನಾನು ಈಗಾಗಲೇ ಸಭೆ ನಡೆಸಿದ್ದೇನೆ. ಭಾರತದ ಆಸಕ್ತಿಯನ್ನು ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಆದಷ್ಟು ಶೀಘ್ರ ಭಾರತ ಕ್ರೀಡಾ ಕೂಟವನ್ನು ಆಯೋಜಿಸಬೇಕೆಂದು ಅವರೂ ಅಭಿಪ್ರಾಯಪಟ್ಟಿದ್ದಾರೆ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.
ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಹೀಗೊಂದು ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ದೆಹಲಿ ಅಥವಾ ಮುಂಬೈನಲ್ಲಿ ಕ್ರೀಡಾ ಕೂಟಕ್ಕೆ ಅವಕಾಶ ನೀಡುವಂತೆ ಕೋರಲಾಗಿದೆ. ಭಾರತದಂತೆಯೇ 2032ರ ಒಲಿಂಪಿಕ್ ಕೂಟ ಆಯೋಜಿಸಲು ಇಂಡೋನೇಷ್ಯಾ, ಜರ್ಮನಿ, ಚೀನಾ ಮತ್ತು ಆಸ್ಟ್ರೇಲಿಯಾ ತೀವ್ರ ಪ್ರಯತ್ನ ನಡೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sportsಕ್ರೀಡೆನವದೆಹಲಿNew DelhiIOA2032 Olympic Games2032 ಒಲಿಂಪಿಕ್ಸ್ ಕ್ರೀಡಾಕೂಟಭಾರತೀಯ ಒಲಿಂಪಿಕ್ ಅಸೋಸಿಯೇಷನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


