ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೈನಾ ನೆಹ್ವಾಲ್ - ಪರುಪಳ್ಳಿ ಕಶ್ಯಪ್
ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ಅವರು ಮುಂಬೈನಲ್ಲಿ ಶುಕ್ರವಾರ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Published On :
ಮುಂಬೈ: ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ಅವರು ಮುಂಬೈನಲ್ಲಿ ಶುಕ್ರವಾರ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಮದುವೆ ನಂತರ ಅದ್ಧೂರಿ ವಿವಾಹದ ಫೋಟೋ ಟ್ವೀಟ್ ಮಾಡಿರುವ ಸೈನಾ, ನನ್ನ ಜೀವನದ ಅತ್ಯುತ್ತಮ ಜೋಡಿ.... #justmarried ಎಂದು ಬರೆದುಕೊಂಡಿದ್ದಾರೆ.
ಈ ಮುಂಚೆ ಡಿಸೆಂಬರ್ 16ರಂದು ಹೈದರಾಬಾದ್‌ನಲ್ಲಿ ವಿವಾಹವಾಗಿದ್ದಾರೆ ಎನ್ನಲಾಗಿತ್ತು. ಆದರೆ ಸೈನಾ ಇಂದೇ ಕಶ್ಯಪ್ ಕೈಹಿಡಿದಿದ್ದು, ಸಮಾರಂಭದಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರು ಮಾತ್ರ ಭಾಗವಹಿಸಿದ್ದರು ಎನ್ನಲಾಗಿದೆ.
ಕೆಲವು ಸಮಯಗಳ ಹಿಂದೆಯಷ್ಟೇ ಕಶ್ಯಪ್ ಜತೆಗಿನ ಪ್ರೇಮ ವಿಚಾರವನ್ನು ಸೈನಾ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


