ಹಾಕಿ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿರುವ ಸಚಿನ್!
ನಾಳಿನ ಹಾಕಿ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಾಕ್ಷಿಯಾಗಲಿದ್ದಾರೆ.

Published On :
ಭುವನೇಶ್ವರ್: ನಾಳಿನ ಹಾಕಿ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಾಕ್ಷಿಯಾಗಲಿದ್ದಾರೆ.
ಕಾಲಿಂಗ ಕ್ರೀಡಾಂಗಣದಲ್ಲಿ ಬೆಲ್ಜಿಯಂ ಹಾಗೂ ನೆದರ್ಲ್ಯಾಂಡ್ ನಡುವೆ ಫೈನಲ್ ಪಂದ್ಯ ನಡೆಯಲಿದ್ದು ಆಟಗಾರರಿಗೆ ಸಚಿನ್ ಚಿಯರ್ ಅಪ್ ಮಾಡಲಿದ್ದಾರೆ.
ಈ ಬಾರಿ ಹಾಕಿ ವಿಶ್ವಕಪ್ ಪಂದ್ಯಾವಳಿಯನ್ನು ಭಾರತ ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ಫೈನಲ್ ಪಂದ್ಯಕ್ಕೆ ಆಗಮಿಸುವುದಾಗಿ ಸಚಿನ್ ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಪಂದ್ಯಾವಳಿಯನ್ನು ಅತ್ಯುತ್ತಮವಾಗಿ ಆಯೋಜಿಸಿದ್ದಕ್ಕೆ ಶುಭಾಶಯ ತಿಳಿಸಿದ್ದಾರೆ.
ಇದಕ್ಕೂ ಮುಂದಿನ ಪಂದ್ಯಗಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಹಾಗೂ ವೀರೇಂದ್ರ ಸೆಹ್ವಾಗ್ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SportsCricketಕ್ರೀಡೆಕ್ರಿಕೆಟ್Sachin Tendulkarಸಚಿನ್ ತೆಂಡೂಲ್ಕರ್Hockey World Cup finalಹಾಕಿ ವಿಶ್ವಕಪ್ ಫೈನಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


