ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಗುಳಿದ ದೀಪಾ ಕರ್ಮಾಕರ್
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಖ್ಯಾತ ಜಿಮ್ನಾಸ್ಟಿಕ್ ತಾರೆ ದೀಪಾ ಕರ್ಮಾಕರ್ ಅವರು ಮುಂಬರುವ ಕಾಮನ್ ವೆಲ್ತ್ ಗೇಮ್ಸ್...

Published On :
ನವದೆಹಲಿ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಖ್ಯಾತ ಜಿಮ್ನಾಸ್ಟಿಕ್ ತಾರೆ ದೀಪಾ ಕರ್ಮಾಕರ್ ಅವರು ಮುಂಬರುವ ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಗುಳಿಯಲಿದ್ದಾರೆ ಎಂದು ಆಕೆಯ ಕೋಚ್ ಬಿಸ್ವೇಶ್ವರ್ ನಂದಿ ಅವರು ಮಂಗಳವಾರ ಹೇಳಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ ನಂತಹ ಪಂದ್ಯಾವಳಿಗೆ ದೀಪಾ ಕರ್ಮಾಕರ್ ಇನ್ನು ಸಿದ್ಧಗೊಂಡಿಲ್ಲ. ಆದರೆ ಆಗಸ್ಟ್ 18ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಯುವ ಏಷ್ಯಿಯನ್ ಗೇಮ್ಸ್ ಸಂಪೂರ್ಣ ಫಿಟ್ನೆಸ್ ಸಾಧಿಸುವುದು ಆಕೆಯ ಗುರಿಯಾಗಿದೆ ಎಂದು ಎಂದು ನಂದಿ ತಿಳಿಸಿದ್ದಾರೆ.
ಕಳೆದ ಎಪ್ರಿಲ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ದೀಪಾ ಈಗಲೂ ಪುನಶ್ಚೇತನದ ಹಂತದಲ್ಲಿದ್ದಾರೆ. ಇದರಿಂದಾಗಿ ರಿಯೋ ಒಲಿಂಪಿಕ್ಸ್ ಬಳಿಕ ಸ್ಪರ್ಧಾತ್ಮಕ ಕೂಟದಲ್ಲಿ ಭಾಗವಹಿಸಲೇ ಇಲ್ಲ.
2016 ರಿಯೋ ಗೇಮ್ಸ್‌ನಲ್ಲಿ ದೀಪಾ, ಮಹಿಳಾ ವಾಲ್ಟ್ ವಿಭಾಗದಲ್ಲಿ ಐತಿಹಾಸಿಕ 4ನೇ ಸ್ಥಾನ ಗಿಟ್ಟಿಸಿಕೊಂಡಿದ್ದರು. ಇದಕ್ಕೂ ಮೊದಲು 2014 ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವ ಮೂಲಕ ಜಿಮ್ನಾಸ್ಟಿಕ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರವಾಗಿದ್ದರು. ಬಳಿಕ 2016 ಏಷ್ಯನ್ ಚಾಂಪಿಯನ್‌ಶಿಪ್ಸ್‌ನಲ್ಲೂ ಕಂಚಿನ ಪದಕ ಗೆದ್ದಿದ್ದರು.
ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಎಪ್ರಿಲ್ 4ರಿಂದ 15ರ ವರೆಗೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


