ಇನ್ವಿಟೇಷನಲ್ ಹಾಕಿ: ಬೆಲ್ಜಿಯಂ ವಿರುದ್ಧ ಭಾರತಕ್ಕೆ 0-2 ಗೋಲುಗಳ ಸೋಲು
ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ನಾಲ್ಕು ರಾಷ್ಟ್ರಗಳ ಇನ್ವಿಟೇಷನಲ್ ಹಾಕಿ ಪಂದ್ಯಾವಳಿಯಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ, ಬೆಲ್ಜಿಯಂ ವಿರುದ್ಧ ಪರಾಭವಗೊಂಡಿದೆ.

Published On :
ತೌರಂಗ (ನ್ಯೂಜಿಲೆಂಡ್): ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ನಾಲ್ಕು ರಾಷ್ಟ್ರಗಳ ಇನ್ವಿಟೇಷನಲ್ ಹಾಕಿ ಪಂದ್ಯಾವಳಿಯಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ, ಬೆಲ್ಜಿಯಂ ವಿರುದ್ಧ ಪರಾಭವಗೊಂಡಿದೆ.
ನಿನ್ನೆ ನಡೆದ ಪಂದ್ಯದಲ್ಲಿ ಜಪಾನ್ ವಿರುದ್ಧ 6-0 ಅಂತರದ ಭರ್ಜರಿ ಗೆಲುವು ಸಾಧಿಸಿದ್ದ ಭಾರತ ಇಂದಿನ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ 0-2 ಅಂತರದ ಸೋಲು ಕಂಡಿದೆ.ತನ್ನ ಮೊದಲ ಪಂದ್ಯದಲ್ಲಿ ಅತಿಥೇಯ ನ್ಯೂಜಿಲೆಡ್ ವಿರುದ್ಧ 4-5 ಅಂತರದ ಸೋಲನ್ನನುಭವಿಸಿದ್ದ ಬೆಲ್ಜಿಯಂ, ಭಾರತದ ವಿರುದ್ಧ ಪ್ರದರ್ಶನದಲ್ಲಿ ಉತ್ತಮ ಸಾಧನೆ ಮಾಡಿದೆ.
ಇಂದಿನ ಪಂದ್ಯದಲ್ಲಿ ಬೆಲ್ಜಿಯಂ ಪರವಾಗಿ ಅರ್ಥುರ್ ಡೆ ಸ್ಲೂವರ್ ಹಾಗೂ ವಿಕ್ಟರ್ ವೆಗ್ನೆಝ್ ಕ್ರಮವಾಗಿ 8 ಹಾಗೂ 34ನೇ ನಿಮಿಷದಲ್ಲಿ ಗೋಲು ದಾಖಲಿಸಿದ್ದರು. ಇನ್ನು ಭಾರತ್ದ ಆಟಗಾರರು ಸಾಕಷ್ಟು ಹೋರಾಟ ನೀಡಿದರೂ ಎದುರಾಳಿಗಳ ಭದ್ರತಾ ಕೋಟೆಯನ್ನು ಭೇದಿಸಲಾಗದೆ ಪರಾಭವ ಅನುಭವಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತNew ZealandBelgiumನ್ಯೂಜಿಲೆಂಡ್ಬೆಲ್ಜಿಯಂInvitational hockey tournamentಇನ್ವಿಟೇಷನಲ್ ಹಾಕಿ ಪಂದ್ಯಾವಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


