ಇಂಡೋನೇಷ್ಯಾ ಓಪನ್: ಸಿಂಧೂ, ಪ್ರಣೋಯ್ ಗೆ ಸೋಲು
ಪ್ರತಿಷ್ಠಿತ ಇಂಡೋನೇಷ್ಯಾ ಬಿಎಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 1000 ಟೂರ್ನಮೆಂಟ್ ನಲ್ಲಿ ಕ್ವಾರ್ಟರ್ ಫೈನಲ್ಸ್ ಹಂತ ತಲುಪಿದ್ದ ಭಾರತದ ಪಿವಿ ಸಿಂಧೂ ಹಾ.....

Published On :
ಜಕಾರ್ತಾ(ಇಂಡೋನೇಷಿಯಾ): ಪ್ರತಿಷ್ಠಿತ ಇಂಡೋನೇಷ್ಯಾ ಬಿಎಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 1000 ಟೂರ್ನಮೆಂಟ್ ನಲ್ಲಿ ಕ್ವಾರ್ಟರ್ ಫೈನಲ್ಸ್ ಹಂತ ತಲುಪಿದ್ದ ಭಾರತದ ಪಿವಿ ಸಿಂಧೂ ಹಾಗೂ ಎಚ್‌ಎಸ್ ಪ್ರಣೋಯ್ ಸೋಲಿನ ಆಘಾತ ಅನುಭವಿಸಿದ್ದಾರೆ.
ಶುಕ್ರವಾರದ ಪಂದ್ಯದಲ್ಲಿ ಪಿವಿ ಸಿಂಧೂ ಚೀನಾದ ಹಿ ಬಿಂಗ್ ಜಿಯಾವೊ ವಿರುದ್ಧ 21-14, 21-15ರ ಅಂತರದಲ್ಲಿ ಸೋಲು ಕಂಡಿದ್ದಾರೆ.
ಪುರುಷರ ಕ್ವಾರ್ಟರ್ ಫೈನಲ್ಸ್ ಹಂತ ತಲುಪಿ ಪ್ರಶಸ್ತಿಯ ಆಸೆ ಮೂಡಿಸಿದ್ದ ಪ್ರಣೋಯ್ ಸಹ ಶಿ ಯೂಕಿ ವಿರುದ್ಧ 21-17, 21-18ರ ಅಂತರದಲ್ಲಿ ಪರಾಭವಗೊಂಡಿದ್ದಾರೆ.
ಕಳೆದ ವಾರ ಮಲೇಷ್ಯಾ ಓಪನ್ ನಲ್ಲಿ ಸೆಮಿ ಫೈನಲ್ಸ್ ನಲ್ಲಿ ಸೋತು ಮರಳಿದ್ದ ಸಿಂಧೂ ಭಾರತದ ಪಾಲಿಗೆ ಇಂಡೋನೇಷ್ಯಾ ಓಪನ್ ಗೆಲ್ಲುವ ಭರವಸೆಯ ಆಟಗಾರ್ತಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


