ಕ್ರೀಡೆ

ಗಾಯದ ಸಮಸ್ಯೆ: ಫ್ರೆಂಚ್‌ ಓಪನ್ ನಿಂದ ಹೊರ ನಡೆದ ಸೆರೆನಾ ವಿಲಿಯಮ್ಸ್‌

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅಮೆರಿಕದ ಟೆನಿಸ್‌ ತಾರೆ ಸೆರೆನಾ ವಿಲಿಯಮ್ಸ್‌ ಅವರು ಸೋಮವಾರ...

ಗಾಯದ ಸಮಸ್ಯೆ: ಫ್ರೆಂಚ್‌ ಓಪನ್ ನಿಂದ ಹೊರ ನಡೆದ ಸೆರೆನಾ ವಿಲಿಯಮ್ಸ್‌
ಮರಿಯಾ ಶರಪೋವಾ - ಸೆರೆನಾ ವಿಲಿಯಮ್ಸ್‌
Published On :
ಪ್ಯಾರಿಸ್‌: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅಮೆರಿಕದ ಟೆನಿಸ್‌ ತಾರೆ ಸೆರೆನಾ ವಿಲಿಯಮ್ಸ್‌ ಅವರು ಸೋಮವಾರ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ.
ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದ 36 ವರ್ಷದ ಸೆರೆನಾ ರಷ್ಯಾದ ಆಟಗಾರ್ತಿ ಮರಿಯಾ ಶರಪೋವಾ ವಿರುದ್ಧ ಸೆಣಸಲಿದ್ದರು. ಆದರೆ, ಎದೆ ಭಾಗದ ಸ್ನಾಯು ಸೆಳೆತದಿಂದಾಗಿ ಟೂರ್ನಿಯಿಂದ ನಿರ್ಗಮಿಸುವ ನಿರ್ಧಾರ ಪ್ರಕಟಿಸಿದ್ದಾರೆ.
23 ಬಾರಿ ಗ್ರ್ಯಾಂಡ್‌ ಸ್ಲಾಮ್‌ ಚಾಂಪಿಯನ್‌ ಆಗಿರುವ ಅವರು ಹೆರಿಗೆ ರಜೆ ಮುಗಿಸಿ ಫ್ರೆಂಚ್‌ ಓಪನ್ ಗಾಗಿ ಸಾಕಷ್ಟು ಶ್ರಮ ವಹಿಸಿದ್ದರು.
ನಿನ್ನೆ ನಡೆದಿದ್ದ ಮಹಿಳೆಯರ ಡಬಲ್ಸ್‌ ವಿಭಾಗದಲ್ಲಿ ಸೆರೆನಾ ವಿಲಿಯಮ್ಸ್ ಮತ್ತು ವೀನಸ್‌ ವಿಲಿಯಮ್ಸ್‌ ಸೋಲು ಅನುಭವಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.