ಕ್ರೀಡೆ

ಕಬಡ್ಡಿ ಮಾಸ್ಟರ್ಸ್: ಪಾಕ್ ಧೂಳಿಪಟ ಮಾಡಿದ ಭಾರತ ಸೆಮಿಫೈನಲ್‌ಗೆ!

ದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಬಗ್ಗುಬಡಿದು ಭಾರತ ಸೆಮಿಫೈನಲ್ ಪ್ರವೇಶಿಸಿದೆ...

ಕಬಡ್ಡಿ ಮಾಸ್ಟರ್ಸ್: ಪಾಕ್ ಧೂಳಿಪಟ ಮಾಡಿದ ಭಾರತ ಸೆಮಿಫೈನಲ್‌ಗೆ!
ಭಾರತ
Published On :
ದುಬೈ: ದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಬಗ್ಗುಬಡಿದು ಭಾರತ ಸೆಮಿಫೈನಲ್ ಪ್ರವೇಶಿಸಿದೆ. 
ಮೊದಲ ಪಂದ್ಯದಲ್ಲೇ ಪಾಕಿಸ್ತಾನವನ್ನು ಮಣಿಸಿದ್ದ ಭಾರತ, 2ನೇ ಪಂದ್ಯದಲ್ಲಿ ಕೀನ್ಯಾ ವಿರುದ್ಧ ಗೆಲುವು ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಮತ್ತೆ ಪಾಕಿಸ್ತಾನವನ್ನು 41-17 ಅಂಕಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. 
ಭಾರತ ಎರಡು ಬಾರಿ ಪಾಕಿಸ್ತಾನವನ್ನು ಆಲೌಟ್ ಮಾಡಿತ್ತು. ಮೊದಲ 8ನೇ ನಿಮಿಷದಲ್ಲಿ ಪಾಕಿಸ್ತಾನವನ್ನು ಭಾರತ ಆಲ್ ಔಟ್ ಮಾಡಿತು. ನಂತರ 25ನೇ ನಿಮಿಷದಲ್ಲಿ ಮತ್ತೊಂದು ಬಾರಿ ಆಲ್ ಔಟ್ ಮಾಡಿದ್ದು ಪಂದ್ಯ ಭಾರತ ಪರ ವಾಲಲು ಕಾರಣವಾಯಿತು. 
ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇರಾನ್ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.