ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಹಾಕಿ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 2-3 ಅಂತರದ ಜಯ

ನೆದರ್ಲ್ಯಾಂಡ್ ನಲ್ಲಿ ನಡೆಯುತ್ತಿರುವ ಎಫ್ಐಹೆಚ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ........

ಚಾಂಪಿಯನ್ಸ್ ಟ್ರೋಫಿ ಹಾಕಿ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 2-3 ಅಂತರದ ಜಯ
ಚಾಂಪಿಯನ್ಸ್ ಟ್ರೋಫಿ ಹಾಕಿ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 2-3 ಅಂತರದ ಜಯ
Published On :
ಬ್ರೆಡಾ (ನೆದರ್ಲ್ಯಾಂಡ್): ನೆದರ್ಲ್ಯಾಂಡ್ ನಲ್ಲಿ ನಡೆಯುತ್ತಿರುವ ಎಫ್ಐಹೆಚ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 2-3 ಗೋಲುಗಳ ಅಂತರದಲ್ಲಿ ವೀರೋಚಿತ ಸೋಲು ಅನುಭವಿಸಿದೆ.
ವಿಶ್ವ ಚಾಂಪಿಯನ್ ಆಸ್ಸ್ಟ್ರೇಲಿಯಾ  ತಂಡದ ಪರ ಲಾಷ್ಲನ್‌ ಶಾರ್ಪ್‌ (6ನೇ ನಿ.), ಟಾಮ್‌ ಕ್ರೇಗ್‌ (15ನೇ ನಿ.) ಮತ್ತು ಟ್ರೆಂಟ್‌ ಮಿಟ್ಟನ್‌ (33ನೇ ನಿ.) ಗೋಲು ಗಳಿಸಿದ್ದಾರೆ.
ಭಾರತದ ಪರವಾಗಿ  ವರುಣ್‌ ಕುಮಾರ್‌ (10ನೇ ನಿ.) ಮತ್ತು ಹರ್ಮನ್‌ಪ್ರೀತ್‌ ಸಿಂಗ್‌ (58ನೇ ನಿ.)ತಲಾ ಒಂದೊಂದು ಗೋಲು ದಾಖಲಿಸಿದ್ದಾರೆ.
ತೀವ್ರ ಪೈಪೋಟಿ ಇದ್ದ ಈ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಸಾಕಷ್ಟು ಪ್ರತಿರೋಧ ತೋರಿದರೂ ಗೆಲುವು ಅವರ ಪಾಲಿಗೆ ಒಲಿಯಲಿಲ್ಲ.
ಮುಂದಿನ ಪಂದ್ಯದಲ್ಲಿ ಭಾರತ ತಂಡ ಬೆಲ್ಜಿಯಂ ಅನ್ನು ಎದುರಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.