ಮಹಿಳಾ ಹಾಕಿ ವಿಶ್ವಕಪ್: ಭಾರತ ತಂಡಕ್ಕೆ ರಾಣಿ ರಾಂಪಾಲ್ ಸಾರಥ್ಯ
ಮುಂದಿನ ತಿಂಗಳು ಲಂಡನ್ ನಲ್ಲಿ ನಡೆಯಲಿರುವ ಮಹಿಳಾ ಹಾಕಿ ವಿಶ್ವಕಪ್ ಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಸ್ಟೈರ್ಕರ್ ರಾಣಿ...

Published On :
ನವದೆಹಲಿ: ಮುಂದಿನ ತಿಂಗಳು ಲಂಡನ್ ನಲ್ಲಿ ನಡೆಯಲಿರುವ ಮಹಿಳಾ ಹಾಕಿ ವಿಶ್ವಕಪ್ ಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಸ್ಟೈರ್ಕರ್ ರಾಣಿ ರಂಪಾಲ್ 18 ಸದಸ್ಯರ ತಂಡವನ್ನು ಮುನ್ನಡೆಸಲಿದ್ದಾರೆ. ಗೋಲ್ ಕೀಪರ್ ಸವಿತಾ ಅವರಿಗೆ ಉಪ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ.
ಜೂನ್ 21ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಹಾಕಿ ವಿಶ್ವಕಪ್ ಗೆ ಇಂದು 18 ಸದಸ್ಯರ ತಂಡ ಪ್ರಕಟಿಸಲಾಗಿದ್ದು, . ಸ್ಪೇನ್ ಪ್ರವಾಸದಲ್ಲಿ ವಿಶ್ರಾಂತಿ ಪಡೆದಿದ್ದ ಗೋಲ್ ಕೀಪರ್ ರಜನಿ ಎತಿಮುರ್ಪು ತಂಡಕ್ಕೆ ವಾಪಸಾಗಿದ್ದಾರೆ.
ಪಂದ್ಯಾವಳಿಯಲ್ಲಿ ಭಾರತ ‘ಬಿ’ ಗುಂಪಿನಲ್ಲಿದ್ದು, ಆತಿಥೇಯ , ವಿಶ್ವದ ನಂಬರ್ 2 ತಂಡ ಇಂಗ್ಲೆಂಡ್, ವಿಶ್ವದ ನಂ.7ನೇ ತಂಡ ಅಮೆರಿಕ ಹಾಗೂ ವಿಶ್ವದ ನಂ.16ನೇ ತಂಡ ಐರ್ಲೆಂಡ್‌ನೊಂದಿಗೆ ಸ್ಥಾನ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


