ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ನವಜೋತ್ ಕೌರ್ ಗೆ ಚಿನ್ನ, ಸಾಕ್ಷಿ ಮಲಿಕ್ ಗೆ ಕಂಚು
ಕಿರ್ಗಿ ಸ್ಥಾನದಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ನವಜೋತ್ ಕೌರ್ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.

Published On :
ಬೆಶ್ ಕೆಕ್(ಕಿರ್ಗಿಸ್ಥಾನ): ಕಿರ್ಗಿ ಸ್ಥಾನದಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ನವಜೋತ್ ಕೌರ್ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗಳಿಸಿದ ಮೊದಲ ಭಾರತೀಯ ಮಹಿಳೆ ಎನ್ನುವ ಕೀರ್ತಿಗೆ ನವಜೋತ್ ಕೌರ್ ಪಾತ್ರರಾಗಿದ್ದಾರೆ.
ಮಹಿಳೆಯರ 65 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ನಡೆದ ಅಂತಿಮ ಸುತ್ತಿನ ಹೋರಾಟದಲ್ಲಿ ಕೌರ್ ಜಪಾನ್‌ನ ಮಿಯಾ ಇಮಾಯ್ ಅವರನ್ನು 9-1ರ ಅಂತರದಿಂದ ಪರಾಭವಗೊಳಿಸಿದರು.
ಸಾಕ್ಷಿ ಮಲಿಕ್ ಗೆ ಕಂಚು
ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತದ ಇನ್ನೋರ್ವ ಕುಸ್ತಿ ಪಟು ಸಾಕ್ಷಿ ಮಲಿಕ್ 62 ಕೆ.ಜಿ ಫ್ರಿಸ್ಟೈಲ್ ವಿಭಾಗದಲ್ಲಿ ನಡೆದ ಪಂದ್ಯದಲ್ಲಿ ಕಜಕಿಸ್ತಾನದ ಅಯ್ಯುಲಿಯಮ್ ಕ್ಯಾಸಿಮೊವಾ ವಿರುದ್ಧ 10-7ರ ಅಂತರದಲ್ಲಿ ಜಯಿಸಿ ಕಂಚಿನ ಪದಕ ಗೆದ್ದಿದ್ದಾರೆ.
ಇದೇ ಕ್ರೀಡಾಕೂಟದಲ್ಲಿ ನಿನ್ನೆ ನಡೆದ ಹೋರಾಟದಲ್ಲಿ ಭಾರತದ ವಿನೇಶ್ ಪೋಗಟ್ ಬೆಳ್ಳಿ ಪದಕ ಗಳಿಸಿದ್ದರು. ಹೀಗೆ ಇದುವರೆವಿಗೆ ಭಾರತವು ಕೂಟದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ, ನಾಲ್ಕು ಕಂಚಿನ ಪದಕಗಳನ್ನು ಗೆದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
goldಚಿನ್ನbronzeSakshi Malikಸಾಕ್ಷಿ ಮಲಿಕ್ಕಂಚುನವಜೋತ್ ಕೌರ್Asian Wrestling ChampionshipsNavjot Kaurಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


