ವಿಶ್ವಕಪ್ ಶೂಟಿಂಗ್: ಮಿಶ್ರ ಡಬಲ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಮನು ಭಾಕರ್
ಮೆಕ್ಸಿಕೊದಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ...

ಮೆಕ್ಸಿಕೋ: ಇಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಯುವ ಮಹಿಳಾ ಶೂಟರ್ ಮನು ಭಾಕರ್ ಮಿಶ್ರ ಡಬಲ್ಸ್ ನಲ್ಲಿ ಮತ್ತೊಂದು ಚಿನ್ನದ ಪದಕ ಗಳಿಸಿದ್ದಾರೆ.
ಸಹ ಆಟಗಾರ ಓಂ ಪ್ರಕಾಶ್ ಮಿತರ್ವಾಲ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಇಂದು ಚಿನ್ನದ ಪದಕ ಗಳಿಸಿದ್ದಾರೆ.
ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟ (ಐಎಸ್ಎಸ್ಎಫ್) ಆಯೋಜಿಸಿರುವ ಈ ವಿಶ್ವಕಪ್ ನಲ್ಲಿ ಮಹಿಳೆಯರ 10 ಮೀ.ಏರ್ ಪಿಸ್ತೂಲ್ ವಿಭಾಗದಲ್ಲಿ ಮನು ನಿನ್ನೆ ಚಿನ್ನದ ಪದಕ ಗಳಿಸಿದ್ದರು.
ನ್ಯಾಷನಲ್ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ ಮೂಲಕ ಹೋದ ಆಟಗಾರರಲ್ಲಿ ಹಿರಿಯರ ವಿಶ್ವಕಪ್ ಗೆದ್ದ ಅತ್ಯಂತ ಕಿರಿಯ ಆಟಗಾರ್ತಿ ಮನು ಭಾಕರ್ ಆಗಿರಬಹುದು. ಆದರೆ ಅಸೋಸಿಯೇಷನ್ ಆ ಬಗ್ಗೆ ಇನ್ನೂ ದೃಢಪಡಿಸಿಲ್ಲ. ಹರ್ಯಾಣ ಮೂಲದ ಮನು ಭಾಕರ್ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರ ಜೊತೆ ದೀಪಕ್ ಕುಮಾರ್ ಮತ್ತು ಮೆಹುಲಿ ಘೋಷ್ 10 ಮೀಟರ್ ಏರ್ ರೈಫಲ್ಸ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


