ಭಾರತ-ಕೊರಿಯಾ ಮಹಿಳಾ ಹಾಕಿ: 4ನೇ ಪಂದ್ಯ ಗೆದ್ದ ಭಾರತಕ್ಕೆ ಸರಣಿ
ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಕೊರಿಯಾ ಮಹಿಳಾ ಹಾಕಿ ಪಂದ್ಯಾವಳಿಯಲ್ಲಿ ಭಾರತ ತಂಡವು 3-1 ಅಂತರದ ಜಯ ಸಾಧಿಸಿದೆ.

Published On :
ಸಿಯೋಲ್(ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಕೊರಿಯಾ ಮಹಿಳಾ ಹಾಕಿ ಪಂದ್ಯಾವಳಿಯಲ್ಲಿ ಭಾರತ ತಂಡವು 3-1 ಅಂತರದ ಜಯ ಸಾಧಿಸಿದೆ. ಒಟ್ಟು ಐದು ಪಂದ್ಯಗಳ ಸರಣಿಯಲ್ಲಿ ಇದು ನಾಲ್ಕನೇ ಪಂದ್ಯವಾಗಿದ್ದು ಭಾರತ 3-1 ಅಂತರದಿಂಡ ಸರಣಿ ಕೈವಶ ಮಾಡಿಕೊಂಡಿದೆ.
ಜಿನ್‌ಚನ್ ಅಥ್ಲೇಟಿಕ್ ಸೆಂಟರ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಅಮೋಘ ಆಟ ಹಾಗೂ ಸಮರ್ಥ ನಿರ್ವಹಣೆಯ ಕಾರಣ ಅತಿಥೇಯರ ವಿರುದ್ಧ ಭರ್ಜರಿ ಜಯ ದಾಖಲಿಸಿದೆ.
ಭಾರತದ ಗುರ್ಜಿತ್ ಕೌರ್ (2ನೇ ನಿಮಿಷ), ದೀಪಿಕಾ (14ನೇ ನಿಮಿಷ) ಹಾಗೂ ಪೂನಂ ರಾಣಿ (47ನೇ ನಿಮಿಷ) ತಮ್ಮ ಗೋಲುಗಳನ್ನು ಗಳಿಸಿ ತಂಡದ ಗೆಲುವಿಗೆ ಕಾರಣಕರ್ತರಾದರು.
ಇನ್ನು ಕೊರಿಯಾ ಪರವಾಗಿ ಮಿ ಹ್ಯುನ್ ಪಾರ್ಕ್ ಪಂದ್ಯದ ಐವತ್ತೇಳನೇ ನಿಮಿಷದಲ್ಲಿ ಗೋಲು ಗಳಿಸಿದ್ದು ತಂಡದ ಸೋಲಿನ ಅಂತರ ತಗ್ಗಿಸಲು ನೆರವಾದರು.
ಸರಣಿಯ ಕೊನೆಯ ಪಂದ್ಯವು ಭಾನುವಾರ (ಮಾ.11)ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


