ಕ್ರೀಡೆ

ಆಲ್ ಇಂಗ್ಲೆಂಡ್ ಓಪನ್ 2018: ಪಿವಿ ಸಿಂಧುಗೆ ಸೋಲು

ಆಲ್ ಇಂಗ್ಲೆಂಡ್ ಓಪನ್ 2018 ಟೂರ್ನಿಯ ಸೆಮಿಫೈನಲ್‌ ಪಂದ್ಯಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು ಜಪಾನ್ ನ ಅಕನೆ ಯಮಗುಚಿ ವಿರುದ್ಧ ಸೋಲು ಅನುಭವಿಸಿದ್ದಾರೆ.

ಆಲ್ ಇಂಗ್ಲೆಂಡ್ ಓಪನ್ 2018: ಪಿವಿ ಸಿಂಧುಗೆ ಸೋಲು
ಪಿವಿ ಸಿಂಧು
Published On :
ಬರ್ಮಿಂಗ್‌ ಹ್ಯಾಮ್‌: ಆಲ್ ಇಂಗ್ಲೆಂಡ್ ಓಪನ್ 2018 ಟೂರ್ನಿಯ ಸೆಮಿಫೈನಲ್‌ ಪಂದ್ಯಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು ಜಪಾನ್ ನ ಅಕನೆ ಯಮಗುಚಿ ವಿರುದ್ಧ ಸೋಲು ಅನುಭವಿಸಿದ್ದಾರೆ. 
ಇಂದು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ವಿರುದ್ಧ ಜಪಾನ್‌ ನ ಯಮಗುಚಿ 19-21, 21-19, 21-18ರ ಅಂತರದಲ್ಲಿ ಗೆಲುವು ದಾಖಲಿಸಿದರು. ಈ ಮೂಲಕ ಯಮಗುಚಿ ಫೈನಲ್ ಪ್ರವೇಶಿಸಿದ್ದಾರೆ. 
ಯಮಗುಚಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ವಿಶ್ವದ ನಂ.1 ಆಟಗಾರ್ತಿ ಚೀನಾದ ತೈ ಝು ಯಿಂಗ್ ಅವರನ್ನು ಎದುರಿಸಲಿದ್ದಾರೆ.
ಸಿಂಧು ಶುಕ್ರವಾರ ನಡೆದ ಎಂಟರ ಘಟ್ಟದ ಪಂದ್ಯದಲ್ಲಿ 2016ನೇ ಸಾಲಿನ ಚಾಂಪಿಯನ್‌, ಜಪಾನ್‌ ನ ನೊಜೊಮಿ ಒಕುಹರಾ ಅವರ ವಿರುದ್ಧ 20–22, 21–18, 21–18ರಿಂದ ಮಣಿಸಿ, ಸೆಮಿ ಫೈನಲ್ ಪ್ರವೇಶಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.