ಚೀನಾ ಓಪನ್: ಸಿಂಧೂ, ಶ್ರೀಕಾಂತ್ ಕ್ವಾರ್ಟರ್ ಫೈನಲ್ ಗೆ ಲಗ್ಗೆ
ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂತನ್ ಪಂದ್ಯಾವಳಿಯಲ್ಲಿ ಭಾರತದ ಕ್ರೀಡಾತಾರೆಯರಾದ ಪಿವಿ ಸಿಂಧೂ ಹಾಗೂ ಕಿಡಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಹಂತ ತಲುಪಿದ್ದಾರೆ.

Published On :
ಬೀಜಿಂಗ್: ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂತನ್ ಪಂದ್ಯಾವಳಿಯಲ್ಲಿ ಭಾರತದ ಕ್ರೀಡಾತಾರೆಯರಾದ ಪಿವಿ ಸಿಂಧೂ ಹಾಗೂ ಕಿಡಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಹಂತ ತಲುಪಿದ್ದಾರೆ.
ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧೂ ಥಾಯ್ ಲ್ಯಾಂಡಿನ ಬುಸಾನಸ್ ಒಗ್ವಂಬುಗ್ವಾನ್ ಅವರನ್ನು 21-12, 21-15 ನೇರ ಸೆಟ್ ಗಳಿಂದ ಮಣಿಸಿ ಎಂಟರ ಘಟ್ಟ ತಲುಪಿದ್ದಾರೆ.
ಪುರುಷರ ವಿಭಾಗದಲ್ಲಿ ಕಿಡಂಬಿ ಶ್ರೀಕಾಂತ್ ಇಂಡೋನೇಷಿಯಾದ ಟಾಮಿ ಸುಗಿರ್ಟೋ ಅವರನ್ನು 10-21, 21-9, 21-9 ಅ<ತರದಲ್ಲಿ ಪರಾಜಿತಗೊಳಿಸಿ ಮುಂದಿನ ಸುತ್ತಿಗೆ ಪ್ರವೇಶ ಗಿಟ್ಟಿಸಿದ್ದಾರೆ.
ಸಿಂಧೂ ತನ್ನ ಮುಂದಿನ ಸುತ್ತಿನಲ್ಲಿ ಫ್ರೆಂಚ್ ಓಪನ್ ಪ್ರತಿಸ್ಪರ್ಧಿಯಾಗಿದ್ದ ಹೇ ಬಿಂಗ್ಜಿಯಾವೊ ಅಥವಾ ಕೆನಡಾದ ಮಿಚೆಲ್ಲಿ ಲೀ ಅವರನ್ನು ಎದುರಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


