ಹಾಂಗ್ ಕಾಂಗ್ ಓಪನ್: ಸಿಂಧೂ, ಶ್ರೀಕಾಂತ್ ಪ್ರಿ ಕ್ವಾರ್ಟರ್ ಗೆ ಲಗ್ಗೆ, ಸೋತ ಸೈನಾ ಮನೆಗೆ
ಹಾಂಕ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರಿಯಲ್ಲಿ ಭಾರತದ ಪಿ.ವಿ. ಸಿಂಧೂ ಮತ್ತು ಕಿಡಂಬಿ ಶ್ರೀಕಾಂತ್ ಪ್ರಿ ಕ್ವಾರ್ಟರ್ ಸುತ್ತಿಗೆ ಪ್ರವೇಶಿಸಿದ್ದಾರೆ.

Published On :
ಕೌಲೂನ್(ಹಾಂಗ್ ಕಾಂಗ್): ಹಾಂಕ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರಿಯಲ್ಲಿ ಭಾರತದ ಪಿ.ವಿ. ಸಿಂಧೂ ಮತ್ತು ಕಿಡಂಬಿ ಶ್ರೀಕಾಂತ್ ಪ್ರಿ ಕ್ವಾರ್ಟರ್ ಸುತ್ತಿಗೆ ಪ್ರವೇಶಿಸಿದ್ದಾರೆ.
ಥಾಯ್ ಲ್ಯಾಂಡಿನ ನಿಚ್ವಾನ್ ಜಿಂದಪೊ ಅವರನ್ನು 21-15, 13-21, 21-17 ಸೆಟ್ ಗಳಿಂದ ಮಣಿಸಿದ ಸಿಂಧೂ ಮುಂದಿನ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಅವರು ತಮ್ಮ ಮುಂದಿನ ಸ್ಪರ್ಧೆಯಲ್ಲಿ ವಿಶ್ವ ನಂ.10 ದಕ್ಷಿಣ ಕೊರಿಯಾದ ಸುಂಗ್ ಜಿ ಹ್ಯುನ್ ಅವರನ್ನು ಎದುರಿಸಲಿದ್ದಾರೆ.
ಪುರುಷರ ಸಿಂಗಲ್ಸ್ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರ ಕಿಡಂಬಿ ಶ್ರೀಕಾಂತ್ ಚೀನಾದ ವಾಂಗ್ ವಿಂಗ್ ಕಿ ವಿನ್ಸೆಂಟ್ ಅವರನ್ನು 21-11.21-15 ಸೆಟ್ ಗಳಿಂದ ಪರಾಭವಗೊಳಿಸಿದ್ದಾರೆ.
ಇದೇ ವೇಳೆ ಭಾರತದ ಇನ್ನೋರ್ವ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ಎದುರಾಳಿ ಜಪಾನ್ ನ ಅಕೆನೆ ಯಮಾಗುಚ್ ಎದುರು 21-10, 10-21, 19-21 ಸೆಟ್ ಗಳಿಂದ ಪರಾಭವಗೊಂಡು ಸರಣಿಯಿಂದ ಹೊರನಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Saina Nehwalಸೈನಾ ನೆಹ್ವಾಲ್PV Sindhuಕಿಡಂಬಿ ಶ್ರೀಕಾಂತ್Kidambi Srikanthಪಿವಿ ಸಿಂಧೂHong Kong Openಹಾಂಗ್ ಕಾಂಗ್ ಓಪನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


