ಪದ್ಮಶ್ರೀ ಪ್ರಶಸ್ತಿಗೆ ಭಜರಂಗ್, ವಿನೇಶ್ ಹೆಸರು ಶಿಫಾರಸು: ಖೇಲ್ ರತ್ನ ವಿವಾದದ ಬಳಿಕ ಕ್ರೀಡಾ ಸಚಿವಾಲಯ ಮಹತ್ವದ ನಿರ್ಧಾರ
: ಕಾಮನ್ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಗಳಲ್ಲಿ ಚಿನ್ನದ ಪದಕ ಗೆದ್ದು ಅದ್ಭುತ ಸಾಧನೆ ಮಾಡಿದ್ದ ಕುಸ್ತಿ ಪಟುಗಳಾದ ಭಜರಂಗ್ ಪೂನಿಯಾ ಹಾಗೂ ವಿನೇಶ್ ಪೋಗಟ್ ಅವರ ಹೆಸರನ್ನು ....

Published On :
ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಗಳಲ್ಲಿ ಚಿನ್ನದ ಪದಕ ಗೆದ್ದು ಅದ್ಭುತ ಸಾಧನೆ ಮಾಡಿದ್ದ ಕುಸ್ತಿ ಪಟುಗಳಾದ ಭಜರಂಗ್ ಪೂನಿಯಾ ಹಾಗೂ ವಿನೇಶ್ ಪೋಗಟ್ ಅವರ ಹೆಸರನ್ನು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಇತ್ತೀಚೆಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾದ ಸಂದರ್ಭ ತನ್ನನ್ನು ಪ್ರಶಸ್ತಿಗಾಗಿ ಪರಿಗಣಿಸಿಲ್ಲ ಎಂದು ಬಹಿರಂಗವಾಗಿ ಬೇಸರ ಹೊರಹಾಕಿದ್ದ ಭಜರಂಗ್ ಅವರ ಹೆಸರನ್ನು ಇದೀಗ ಕೇಂದ್ರ ಕ್ರೀಡಾ ಸಚಿವಾಲಯ "ಪದ್ಮಶ್ರೀ" ಪ್ರಶಸ್ತಿಗಾಗಿ ಸೂಚಿಸಿದೆ. ವಿಶೇಷವೆಂದರೆ ಭಾರತ ಕುಸ್ತಿ ಸಂಘಟನೆ ಭಜರಂಗ್ ಹಾಗೂ ವಿನೇಶ್ ಹೆಸರನ್ನು ಪದ್ಮ ಪ್ರಶಸ್ತಿಗೆ ಸೂಚಿಸಿಲ್ಲವಾದರೂ ಕ್ರೀಡಾ ಸಚಿವಾಲಯ ಸ್ವಯಂಪ್ರೇರಿತವಾಗಿ ಇಬ್ಬರ ಹೆಸರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಬರೆದಿದೆ.
ಇದಕ್ಕೆ ಮುನ್ನ ಸಹ ಅಥ್ಲೀಟ್ ಗಳಾದ ಮೀರಾಬಾಯಿ ಚಾನು ತಮಗೆ ಖೇಲ್ ರತ್ನ ಪ್ರಶಸ್ತಿ ಬರುವ ಮುನ್ನವೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರೆನ್ನುವುದನ್ನು ನಾವಿಲ್ಲಿ ಸ್ಮರಿಸಬಹುದು.
ಖೇಲ್ ರತ್ನ ಪ್ರಶಸ್ತಿ ಆಯ್ಕೆ ಸಮಿತಿ ತನ್ನ ಹೆಸರನ್ನು ಪರಿಗಣಿಸದ ಕಾರಣ ಸಮಿತಿ ವಿರುದ್ಧ ನ್ಯಾಯಾಲಯಕ್ಕೆ ತೆರಳುವುದಾಗಿ ಭಜರಂಗ್ ಬೆದರಿಕೆ ಹಾಕಿದ್ದರು. ಭಜರಂಗ್ ಅವರಿಗೆ ೮೦ ಅಂಕ ದೊರಕಿದ್ದರೂ ಅವರನ್ನು ಪ್ರಶಸ್ತಿಗೆ ಪರಿಗಣಿಸಿರ್ಲಿಲ್ಲ. ಈ ಸಂಬಂಧ ಅವ್ಚರು ಸೆಪ್ಪ್ಟೆಂಬರ್ ೨೦ರಂದು ಕೇಂದ್ರ ಕ್ರೀಡಾ ಸಚಿವರನ್ನು ಭೇಟಿಯಾಗಿ ತನ್ನ ಅಸಮಾಧಾನ ತೋಡಿಕೊಂಡಿದ್ದರು. ಸಚಿವರು ಅವರಿಗೆ ಸಕಾರಾತ್ಮಕ ಭರವಸೆ ನೀಡಿದ ಕಾರಣ ನ್ಯಾಯಾಲಯಕ್ಕೆ ತೆರಳುವ ತಮ್ಮ ನಿರ್ಧಾರವನ್ನು ಕುಸ್ತಿಪಟು ಕೈಬಿಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


